NEWSದೇಶ-ವಿದೇಶನಮ್ಮರಾಜ್ಯ

ನಿಮ್ಮ ಸದಾರಮೆ ಸಾಕು ಮಳೆ, ಕೊಲೆಗಳಿಂದ ತತ್ತರಿಸಿರುವ ಕರಾವಳಿ ಜನತೆಗೆ ಧೈರ್ಯ ತುಂಬಿ: ಸಿಎಂಗೆ ಎಚ್‌ಡಿಕೆ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ Xಮಾಡಿರುವ ಅವರು, ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

ಇನ್ನು ‘ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು’ ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೋಡಿ ಸಿದ್ದರಾಮಯ್ಯ ನವರೇ, ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!!

ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ! ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ‘ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ