NEWSದೇಶ-ವಿದೇಶರಾಜಕೀಯ

ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಎಎಪಿಗೆ ನಿಮ್ಮ ಮತ ನೀಡಿ: ಸಿಎಂ ಕೇಜ್ರಿವಾಲ್  ಮನವಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ನಿಮ್ಮ ಮತ ಚಲಾಯಿಸಿ ಎಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ದೆಹಲಿ ಜನತೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಟ್ವೀಟ್ ಮಾಡಿರುವ ಕೇಜ್ರಿವಾಲ್, ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಪಾಲಿಕೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‍ಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವು ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ನಡೆಯಲಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ದೆಹಲಿಯಲ್ಲಿ ಒಟ್ಟು 1,45,05,358 ಮತದಾರರಿದ್ದಾರೆ. ಈ ಪೈಕಿ 78,93,418 ಪುರುಷರು, 66,10,879 ಮಹಿಳೆಯರು ಮತ್ತು 1,061 ತೃತೀಯಲಿಂಗಿಗಳಿದ್ದಾರೆ. ಚುನಾವಣಾ ಆಯೋಗ 13,638 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾರರ ಗುಣಮಟ್ಟದ ಅನುಭವಕ್ಕಾಗಿ 68 ಮಾದರಿ ಮತ್ತು 68 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಿದೆ.

68 ಮಾದರಿ ಮತಗಟ್ಟೆಗಳಲ್ಲಿ ನಿಲ್ಲಲು ಸ್ಥಳ, ಲೌಂಜ್, ಮತದಾರರಿಗೆ ಸಿಹಿತಿಂಡಿ, ಟೋಪಿ ವಿತರಣೆ, ಸೆಲ್ಫಿ ಬೂತ್ ಮತ್ತು ಅಂಗವಿಕಲರು, ಹಿರಿಯ ನಾಗರಿಕರಿಗೆ ಸಹಾಯ ಮಾಡಲು ನಾಗರಿಕ ರಕ್ಷಣಾ ಸ್ವಯಂಸೇವಕರು ಸೇರಿದಂತೆ ಸೌಲಭ್ಯಗಳನ್ನೂ ಒದಗಿಸಿದೆ.

ರಾಷ್ಟ್ರ ರಾಜಧಾನಿ ದೇಹಲಿಯಲ್ಲಿ ನಗರ ಸ್ಥಳೀಯ ಸಂಸ್ಥೆಯ ಚುಕ್ಕಾಣಿ ಹಿಡಿಯಲು ಈಗಾಗಲೇ ಘಾಟಾನುಘಟಿ ನಾಯಕರು ಪ್ರಚಾರ ನಡೆಸಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಡಿಸೆಂಬರ್ 7 ರಂದು ಮತ ಎಣಿಕೆ ಮಾಡಲಾಗುವುದು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ