NEWSನಮ್ಮರಾಜ್ಯ

ಸಾರಿಗೆ ನೌಕರರ ವೇತನ ಸಂಬಂಧ: ಜಂಟಿ ಕ್ರಿಯಾಸಮಿತಿ ಪದಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ KSRTC ಎಂಡಿ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಇಂದು ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೂ ಸಂಸ್ಥೆ ಎಂಡಿ ಗೌಪ್ಯ ಸಭೆ ನಡೆಸಿದ್ದಾರೆ.

ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳನ್ನು ಶಾಂತಿನಗರದಲ್ಲಿರುವ ತಮ್ಮ ಕೇಂದ್ರ ಕಚೇರಿಗೆ ಕರೆಸಿಕೊಂಡು ಸುಮಾರು ಮೂರು ಗಂಟೆಗಳ ಕಾಲ ಗೌಪ್ಯ ಸಭೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಸಭೆ ಬಳಿಕ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಾರಿಗೆ ನೌಕರರ ವೇತನ ಸಂಬಂಧ ಅಂತಿಮ ಆದೇಶ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

ಆದರೆ, ಮೂರು ಗಂಟೆಗಳು ನಡೆದ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದನ್ನು ಇನ್ನೂ ಗೌಪ್ಯವಾಗಿಡಲಾಗಿದ್ದು, ವಿಧಾನಸೌಧದಲ್ಲೇ ಅದನ್ನು ಬಹಿರಂಗ ಪಡಿಸಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಇಂದು ಸಂಜೆ ವಿಧಾನಸೌಧದಲ್ಲೇ ಅದೂ ಮುಖ್ಯಮಂತ್ರಿಯವರಿಂದಲೇ ಶೇ….. ರಷ್ಟು ವೇತನ ಹೆಚ್ಚಳ ಮಾಡುವುದಕ್ಕೆ ನಾವು ಒಪ್ಪಿದ್ದು ಅದನ್ನು ಜಂಟಿ ಕ್ರಿಯಾ ಸಮಿತಿಯವರು ಸಮ್ಮತಿಸಿದ್ದಾರೆ ಎಂದು ಹೇಳಿಸುವ ತಂತ್ರವನ್ನು ಹೆಣೆಯಲಾಗಿದೆ ಎಂದು ತಿಳಿದು ಬಂದಿದೆ.

ಹೀಗಾಗಿ ಇಂದು ಸಂಜೆ ವೇಳೆಗೆ ಸಾರಿಗೆ ನೌಕರರಿಗೆ ಶೇ. ಎಷ್ಟರಷ್ಟು ವೇತನ ಹೆಚ್ಚಳ ವಾಗಿದೆ ಎಂಬುವುದು ಬಹುತೇಕ ಖಚಿತವಾಗಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ