ಚೆನ್ನೈ: ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರ ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿ, ಜಾತಿ ಪ್ರಮಾಣ ಸಿಗದಿದ್ದಕ್ಕೆ ನಮನೊಂದು ಮದ್ರಾಸ್ ಹೈಕೋರ್ಟ್‍ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮಿಳುನಾಡಿನ ಕಾಂಚೀಪುರಂನ ವೇಲ್ಮುರುಗನ್ (49) ಎಂಬುವರೆ ಮೃತರು. ಪರಿಶಿಷ್ಟ ಪಂಗಡದ ಮಲೈಕುರವರ್ ಎಂಬ ಜಾತಿ ಪ್ರಮಾಣಪತ್ರವನ್ನು ಪಡೆಯಲು ವೇಲ್ಮುರುಗನ್ ಓಡಾಡುತ್ತಿದ್ದರು. ಆದರೆ ಜಾತಿ ಪ್ರಮಾಣಪತ್ರ ಪಡೆಯಲು ಸಾಧ್ಯವಾಗದ ಹಿನ್ನೆಲೆ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದರು.
ಕೂಡಲೇ ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶೇ.95ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರಕಣದ ಗಂಭೀರತೆ: ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ನ್ಯಾಯಮೂರ್ತಿ ಸುಬ್ರಮಣಿಯನ್ ಅವರು, ಜಾತಿ ಪ್ರಮಾಣಪತ್ರ ನೀಡುವಲ್ಲಿ ಹಲವಾರು ಅಕ್ರಮಗಳು ನಡೆದಿರುವುದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.
ಮೃತ ವ್ಯಕ್ತಿ ಮತ್ತು ಅವರ ಪುತ್ರನಿಗೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಹಕ್ಕು ಉಲ್ಲಂಘನೆಯಾಗಿದೆಯೇ ಎಂಬುದನ್ನು ನ್ಯಾಯಾಲಯ ಪರಿಶೀಲಿಸಬೇಕಿದೆ. ಈ ಘಟನೆಯನ್ನು ಸುಮ್ಮನೆ ಬಿಡಲಾಗುವುದಿಲ್ಲ. ಕಾರಣ ಇದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ತಿಳಿಸಿದ್ದಾರೆ.