NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಸಂಸ್ಥೆಯ ಗೈರಾಗಿರುವ ನೌಕರರಿಗೆ ಎಚ್ಚರಿಕೆ: ನಾಳೆಯೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದರೆ ಉಗ್ರ ಶಿಕ್ಷೆಯ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಯ ಗೈರು ಹಾಜರಿಯಲ್ಲಿರುವ ಸಿಬ್ಬಂದಿಗಳು ಡಿಸೆಂಬರ್‌ 4-2025ರ ಒಳಗಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಅಂತಹ ಸಿಬ್ಬಂದಿ ವಿರುದ್ಧ ಉಗ್ರ ಶಿಕ್ಷೆ (Major punishment ) ವಿಧಿಸುವ ಮೂಲಕ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಭದ್ರತಾ & ಜಾಗೃತ ವಿಭಾಗದ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಇನ್ನು ಈ ಸಂಬಂಧ ಎಲ್ಲ ಘಟಕಗಳ ಡಿಪೋ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಗೈರು ಹಾಜರಿ ನಿಯಂತ್ರಿಸುವ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದು ಈ ಸಭೆಯಲ್ಲಿ ಕೆಳಕಂಡ ಸೂಚನೆಗಳನ್ನು ನೀಡಿದ್ದಾರೆ.

1) ಗೈರು ಹಾಜರಿಯಲ್ಲಿರುವ ಸಂಸ್ಥೆಯ ಸಿಬ್ಬಂದಿಗಳನ್ನು ಸಂಪರ್ಕಿಸಿ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ತಿಳಿಸಬೇಕು. ಸಿಬ್ಬಂದಿ ತಕ್ಷಣವೇ ವರದಿ ಮಾಡಿಕೊಂಡಲ್ಲಿ ಶಿಸ್ತಿನ ಕ್ರಮ ಕೈಗೊಳ್ಳದೆ ಗೈರು ಪ್ರಕರಣವನ್ನು ತೀರ್ಮಾನಿಸಲಾಗುವುದು.

2) ಗೈರು ಹಾಜರಿಯಲ್ಲಿರುವವರು 04/12/2025ರ ಒಳಗಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಅಂತಹ ಸಿಬ್ಬಂದಿ ವಿರುದ್ಧ ಉಗ್ರ ಶಿಕ್ಷೆ (Major punishment ) ವಿಧಿಸುವ ಮೂಲಕ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

3) ಗೈರು ಹಾಜರಿಯಲ್ಲಿರುವ ಸಿಬ್ಬಂದಿ ತೀವ್ರ ತರಹದ ಕಾಯಿಲೆಯಿಂದ ಬಳಲುತ್ತಿದ್ದರೆ, ಅಂತಹ ಸಿಬ್ಬಂದಿ ಸೂಕ್ತ ದಾಖಲೆಗಳೊಂದಿಗೆ ಹಾಜರಾದರೆ ಅವರಿಗೆ ರಜೆ ನೀಡಲಾಗುವುದು.

4) ಕರ್ತವ್ಯ ನಿರ್ವಹಿಸಲು ಆಶಕ್ತರಾದವರು (not-fit for duty ) VRS ತೆಗೆದುಕೊಳ್ಳಲು ತಿಳಿವಳಿಕೆ ನೀಡಬೇಕು.

5) ಪದೇಪದೇ ಗೈರು ಹಾಜರಾಗುವ ಸಿಬ್ಬಂದಿಗಳ Pass /ID-card ಅನ್ನು ವರ್ಷ ಪೂರ್ತಿ ನವೀಕರಿಸದೆ (renewal) ವಾರದ ಅಥವಾ ತಿಂಗಳ ಅವಧಿಗೆ ಮಾತ್ರ ನವೀಕರಿಸಬೇಕು (ಮುಂದುವರಿದ ನಿರ್ದೇಶನಗಳನ್ನು ನೀಡಲಾಗುವುದು).

6) ಗೈರು ಹಾಜರಿಯಲ್ಲಿರುವ ಸಿಬ್ಬಂದಿಗಳು ದೂರವಾಣಿ ಸಂಪರ್ಕಕ್ಕೆ ಸಿಗದೇ ಇದ್ದಾಗ, ಘಟಕದ Security/ Traffic asst / Est ಯವರು ಖುದ್ದಾಗಿ ಗೈರಾಗಿರುವ ಸಿಬ್ಬಂದಿಗಳ ಮನೆಗೆ ಭೇಟಿ ಇತ್ತು ಮನವರಿಕೆ ಮಾಡಬೇಕು. ಇನ್ನು ಮನೆ 25ಕಿಮೀ ಒಳಗಿದ್ದರೆ ಘಟಕದ ಜೀಪ್ ಉಪಯೋಗಿಸಬಹುದು ಎಂಬ ಮಹತ್ವದ ಸೂಚನೆಗಳನ್ನು ಘಟಕ ವ್ಯವಸ್ಥಾಪಕರಿಗೆ ಭದ್ರತಾ & ಜಾಗೃತ ವಿಭಾಗದ ನಿರ್ದೇಶಕರು ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ