NEWSಕೃಷಿದೇಶ-ವಿದೇಶನಮ್ಮರಾಜ್ಯ

ಯಾವುದೇ ಕಾರಣಕ್ಕೂ ತ.ನಾಡಿಗೆ ನೀರು ಬಿಡಬಾರದು: ಎಎಪಿ ರಾಜ್ಯಾಧ್ಯಕ್ಷ ಮು.ಚಂದ್ರು ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಮನಗರದ ಎಪಿಎಂಸಿ ಸಭಾಂಗಣದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ಕಾವೇರಿ ನೀರಿನ ಸಮಸ್ಯೆ ಹಾಗೂ ಮೇಕೆದಾಟು ನಿರ್ಮಾಣ ಯೋಜನೆ ಬಗ್ಗೆ ಬುಧವಾರವಾದ ಇಂದು ಸೆ.13ರಂದು ಆಯೋಜಿಸಿದ್ದ ಎರಡನೇ ‘ಚಿಂತನ ಮಂಥನ’ದಲ್ಲಿ ಮಾತನಾಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ. ಅದನ್ನು ನಿಜವಾಗಿಯೂ ಹೇಳಿದ್ದಾರೋ, ಅಥವಾ ನಮ್ಮ ಹೋರಾಟ ನಿಲ್ಲಿಸಲು ಹೇಳಿದ್ದಾರೋ ಗೊತ್ತಿಲ್ಲ ಎಂದು ಕುಟುಕಿದರು.

ರಾಜ್ಯ ಸರ್ಕಾರದ ಮೇಲೆ ಯಾವ ರೀತಿಯ ಒತ್ತಡ ಹಾಕಬೇಕು, ಮುಂದಿನ ಹೋರಾಟ ಹೇಗಿರಬೇಕು. ಬರಿ ಹೋರಾಟದಿಂದ ಮಾತ್ರ ಕೆಲಸ ಆಗುತ್ತದೆಯಾ ಅಥವಾ ನಾವೂ ಕೂಡ ಅರ್ಜಿ ಸಲ್ಲಿಸಲು ಸಾಧ್ಯವಿದೆಯಾ ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಾಜಕಾರಣಿಗಳು ಹೇಳುವುದೊಂದು, ಮಾಡುವುದೊಂದು : ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಆದ್ದರಿಂದ ನಾವು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ದೂರ ಇಟ್ಟಿದ್ದೇವೆ. ನಾನು ದೇವೇಗೌಡರ ಜತೆ ಕೂಡ ಹೋರಾಟ ಮಾಡಿದ್ದೇನೆ. ರಾಜಕಾರಣಿಗಳು ಹೇಳುವುದು ಒಂದು, ಮಾಡುವುದು ಇನ್ನೊಂದು. ಅದಕ್ಕಾಗಿ ಅವರನ್ನು ದೂರ ಇಟ್ಟಿದ್ದೇವೆ ಎಂದರು.

ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡುವಾಗ ನನ್ನನ್ನು ಕರೆದಿದ್ದರು. ಆದರೆ, ನಾನು ಹೋಗಲಿಲ್ಲ. ಆದರೆ, ಅವರೀಗ ರಾಜಕಾರಣಿಯಂತೆ ಮಾತನಾಡುತ್ತಿದ್ದಾರೆ. ಮೇಕೆದಾಟು ಹೋರಾಟ ಅವರದ್ದಲ್ಲ, ಈ ಭಾಗದ ಜನರು ಮೊದಲಿನಿಂದಲೂ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ನೀಡಿರುವ ಆದೇಶವನ್ನು ಸರ್ಕಾರ ಧಿಕ್ಕರಿಸಬೇಕು. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಆದೇಶ ರದ್ದು ಪಡಿಸುವಂತೆ ಮಾಡಬಹುದಾ ಎಂಬ ಬಗ್ಗೆ ಸರ್ಕಾರ ಚಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

1.20 ಕೋಟಿ ಜನ ಬೆಂಗಳೂರಿನಲ್ಲಿ ಇದ್ದಾರೆ. ಇದರಲ್ಲಿ ಅರ್ಧದಷ್ಟು ಜನರು ಬೇರೆ ರಾಜ್ಯದಿಂದ ಬಂದವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗುವ ಆತಂಕ ಇದ್ದು, ಬೆಂಗಳೂರಿನ ಸಂಘ ಸಂಸ್ಥೆಗಳು ಕೂಡ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲರನ್ನು ಭೇಟಿ ಮಾಡಿ, ರಾಜ್ಯದ ರೈತರ ಸಂಕಷ್ಟ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡುವ ಬಗ್ಗೆ ಸಮಿತಿ ಚಿಂತಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಂಗಕರ್ಮಿ ಕಪ್ಪಣ್ಣ, ಜಲ ತಜ್ಞ ರಾಜಾರಾಂ, ಆಮ್ ಆದ್ಮಿ ಪಕ್ಷದ ಸಂಚಿತ್ ಸೇವಾನಿ, ಸುಷ್ಮಾ ವೀರ್, ಬೈರೇಗೌಡ, ಸೋಸಲೇ ಸಿದ್ದರಾಜು, ಮಾಳವಿಕ, ರೈತ ಮುಖಂಡರಾ ಪುಟ್ಟಸ್ವಾಮಿ, ಕ್ಯಾಪ್ಟನ್ ರಾಜಾರಾವ್, ಡಾ ಪ್ರಕಾಶ್ ಕಮರಡಿ, ಕನ್ನಡ ಸಂಘಟನೆ  ಕುಮಾರಸ್ವಾಮಿ, ಆಂಜನೇಯ ರೆಡ್ಡಿ, ಬೈರೇಗೌಡ, ಹನುಮಾನಹಳ್ಳಿ ಶಿವಕುಮಾರ್ ಸೇರಿದಂತೆ ಇನ್ನಿತರ ಕನ್ನಡಪರ ಸಂಘಟನೆಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು