NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಜಾಪ್ರಭುತ್ವ ಉಳಿವಿಗೆ ಸಿಎಂ ಕೇಜ್ರಿವಾಲ್‌ ಜತೆ ನಾವೂ ಜೈಲಿಗೆ ಹೋಗಲು ಸಿದ್ಧ; ಡಾ.ಮುಖ್ಯಮಂತ್ರಿ ಚಂದ್ರು

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ ನಾವಾಗಲಿ ಹೆದರುವುದಿಲ್ಲ, ದೇಶಕ್ಕಾಗಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಹೇಳಿದರು.

ಆಮ್ ಆದ್ಮಿ ಪಾರ್ಟಿ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕರು ಮತ್ತು ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರಾಳ ದಿನಾಚರಣೆಯನ್ನು ಆಚರಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಮುಖ್ಯಮಂತ್ರಿ ಚಂದ್ರು, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೊರಟವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ. ಐಟಿ, ಇ.ಡಿಯಂತಹ ಸಂಸ್ಥೆಗಳನ್ನು ಬಳಸಿಕೊಂಡು ತಮ್ಮ ವಿರುದ್ಧ ಇರುವವರನ್ನು ಹಣಿಯಲು ಕೇಂದ್ರ ಸರ್ಕಾರ ಸಂಚು ಮಾಡಿದೆ. ಕೇಜ್ರಿವಾಲ್ ಅವರ ಜನಪ್ರಿಯತೆ ಸಹಿಸದೆ ಕುತಂತ್ರದಿಂದ ಬಂಧಿಸಲಾಗಿದೆ. ಅವರಿಗೆ ಜಾಮೀನು ಕೂಡ ಸಿಗದಂತೆ ತಂತ್ರ ಮಾಡಲಾಗಿದೆ ಎಂದು ದೂರಿದರು.

ಚುನಾವಣಾ ಬಾಂಡ್ ಹೆಸರಿನಲ್ಲಿ ಕಪ್ಪುಹಣವನ್ನು ತಮ್ಮ ಪಕ್ಷದ ಅಕೌಂಟ್‌ಗೆ ಹಾಕಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವರನ್ನು ಹೆದರಿಸಿ ಅವರ ಪಕ್ಷದ ಚುನಾವಣಾ ಬಾಂಡ್‌ಗಳನ್ನು ಖರೀದಿ ಮಾಡುವಂತೆ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿಜೆಪಿ ನಾಯಕರು, ಅವರನ್ನು ಮೊದಲು ಜೈಲಿಗೆ ಹಾಕಬೇಕು ಎಂದರು.

ಬಂಧಿಸಿದ ಮಾತ್ರಕ್ಕೆ ನಾವಾಗಲೀ ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಅವರಾಗಲಿ ಹೆದರುವುದಿಲ್ಲ, ನಮ್ಮನ್ನು ಕೂಡ ಜೈಲಿಗೆ ಹಾಕಲಿ ಎಂದು ಸವಾಲೆಸೆದ ಅವರು, ಈ ಬಾರಿ ಚುನಾವಣೆ ಪಾರದರ್ಶಕವಾಗಿ, ನ್ಯಾಯಯುತವಾಗಿ ನಡೆಯುತ್ತದೆ ಎನ್ನುವ ನಂಬಿಕೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆ ನೋಡಿ ಪ್ರಧಾನಿ ಮೋದಿ ಭಯಗೊಂಡಿದ್ದಾರೆ. ಅದಕ್ಕಾಗಿಯೇ ಕೇಜ್ರಿವಾಲ್‌ರನ್ನು ಕಟ್ಟಿಹಾಕಲು ಅಕ್ರಮವಾಗಿ ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಇ.ಡಿ, ಐಟಿ, ಸಿಬಿಐಯಂತಹ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದರು.

ರಾಜ್ಯ ಸಂಘಟನಾ ಕಾರ್ಯಕದರ್ಶಿ ಮೋಹನ್ ದಾಸರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಒತ್ತಾಯದ ಮೇರೆಗೆ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಭ್ರಷ್ಟಾಚಾರ ಮಾಡಿರುವ ಬಿಜೆಪಿ ದೇಶದ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಮಾಡಿದ್ದಾರೆ ಎಂದರು.

400 ಸೀಟುಗಳನ್ನು ಗೆಲ್ಲುತ್ತೇನೆ ಎನ್ನುವ ಪ್ರಧಾನಿ ಮೋದಿ ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ. ಕೇಜ್ರಿವಾಲ್ ಅವರ ಜನಪ್ರಿಯತೆ ಕಂಡು ಹೆದರಿದ್ದಾರೆ. ಅದಕ್ಕಾಗಿಯೇ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅವರನ್ನು ಬಂಧಿಸಲಾಗಿದೆ. ನಿಮ್ಮನ್ನು ದೇಶದಿಂದ ಹೊರಹಾಕಲು ಮತದಾರರು ಕಾಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ರಾಜ್ಯ ಕಾರ್ಯದರ್ಶಿಗಳಾದ ಉಷಾ ಮೋಹನ್, ಬಸವರಾಜ ಮುದಿಗೌಡರ್, ನಗರಾಧ್ಯಕ್ಷ ಡಾ.ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ಚೆನ್ನಪ್ಪ ಗೌಡ ,ಆರಾಧ್ಯ ,ಜ್ಯೋತಿಷ್ ಕುಮಾರ್ , ವೀಣಾ ಸರವು ಮಹಾಲಕ್ಷ್ಮಿ, ಅಂಜನಾ ಗೌಡ ಸತ್ಯವಾಣಿ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ