NEWSಕೃಷಿನಮ್ಮರಾಜ್ಯ

ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ನಡೆದ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದರು.

ಇನ್ನು ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ ಎಂದು ಕೂಡ ತಿಳಿಸಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

ಸರ್ಕಾರ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು ಎಂದರು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ವೇಳೆ ಸಚಿವರಾದ ಎಂ.ಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ