NEWSನಮ್ಮಜಿಲ್ಲೆ

ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ

 

  • ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿರವರಿಂದ ಬೆಂ.ಗ್ರಾಮಾಂತರ ಜಿಲ್ಲಾ ಸಚಿವರಿಗೆ ದಾಖಲಾತಿ ಹಸ್ತಾಂತರ
  • ಆಡಳಿತಾತ್ಮಕವಾಗಿ ಸೋಲೂರು ಇಂದು ನೆಲಮಂಗಲ ತಾಲೂಕಿಗೆ ಸೇರ್ಪಡೆ
  • ಮಾಗಡಿ ತಾಲೂಕಿನ ಸೋಲೂರು ಹೋಬಳಿ ಆಡಳಿತಾತ್ಮಕವಾಗಿ ನೆಲಮಂಗಲ ತಾಲೂಕಿಗೆ ಸೇರ್ಪಡೆ ಯಶಸ್ವಿ

ಬೆಂಗಳೂರು ಗ್ರಾಮಾಂತರ: ಸುಮಾರು 47 ವರ್ಷದಿಂದ ಅತಂತ್ರವಾಗಿದ್ದ ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಗಡಿ ತಾಲೂಕಿಗೆ ಒಳಪಟ್ಟಿದ್ದ ಸೋಲೂರು ಹೋಬಳಿಯನ್ನು ನೆಲಮಂಗಲ ತಾಲೂಕಿಗೆ ಇಂದು ಆಡಳಿತಾತ್ಮಕವಾಗಿ ಸೇರ್ಪಡೆ ಮಾಡುವ ಕಾರ್ಯಕ್ರಮ ನೆಲಮಂಗಲ ತಾಲೂಕು ಕಚೇರಿ ಆವರಣದಲ್ಲಿ ನಡೆಯಿತು.

ಇದೇ ವೇಳೆಯಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಎನ್.ಶ್ರೀನಿವಾಸ್ ಹಾಗೂ ಅಧಿಕಾರಿಗಳಿಗೆ, ಸೋಲೂರು ಹೋಬಳಿಯ ಡಿಜಿಟಲೀಕೃತ ಭೂ ದಾಖಲೆ ಮತ್ತು ಕಡತಗಳು, ದಾಖಲಾತಿಗಳನ್ನು ಹಸ್ತಾಂತರ ಮಾಡಿದರು.

ಸಚಿವರಾದ ಕೆ.ಎಚ್.ಮುನಿಯಪ್ಪ ಮಾತನಾಡಿ, ಸೋಲೂರು ಹೋಬಳಿಗೆ ಒಳ್ಳೇಯದಾಗಿದೆ, ಅಭಿವೃದ್ಧಿಗೆ ಅನುಕೂಲವಾಗಿದೆ, ಎಲ್ಲ ಇಲಾಖೆಗಳು ನೆಲಮಂಗಲಕ್ಕೆ ಸೇರಲಿದೆ, ನಾಗರಿಕರು ಇಲಾಖೆಗಳೊಂದಿಗೆ ಸ್ಪಂದಿಸಬೇಕು, ಸೋಲೂರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಸೇರಿ ದೊಡ್ಡದ್ದಾಗಿತ್ತು, ಇದೀಗ ನೆಲಮಂಗಲಕ್ಕೆ ಆಡಳಿತಾತ್ಮಕವಾಗಿ ಸೇರಿರುವುದು ಉತ್ತಮ ಬೆಳವಣಿಗೆ ಎಂದರು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಮಾತನಾಡಿ, ಆಡಳಿತಾತ್ಮಕವಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ಸೋಲೂರು ಹೋಬಳಿ (ರಾಮನಗರ) ಜಿಲ್ಲೆ ಮಾಗಡಿ ತಾಲೂಕಿಗೆ ಸೇರಿದರೆ ವಿಧಾನಸಭಾ ಚುನಾವಣೆಗೆ ನೆಲಮಂಗಲ ಹಾಗೂ ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರಕ್ಕೆ ಸೇರಿತ್ತು, ನೆಲಮಂಗಲಕ್ಕೆ ಸೇರುವ ಬಯಕೆ ಇದ್ದರೂ ಕಳೆದ 47 ವರ್ಷಗಳಿಂದ ಚುನಾವಣೆಗಳ ಪ್ರಣಾಳಿಕೆಯ ವಸ್ತುವಾಗಿತ್ತು. ಆದರೆ ಶಾಸಕ ಎನ್. ಶ್ರೀನಿವಾಸ್‌ ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ 3 ವರ್ಷದಲ್ಲಿ ಸೋಲೂರನ್ನು ನೆಲಮಂಗಲಕ್ಕೆ ಸೇರ್ಪಡೆ ಮಾಡಿರುವುದು ಉತ್ತಮ ಬೆಳವಣಿಗೆ, ನೆಲಮಂಗಲ ನಗರ, ದಾಬಸ್ ಪೇಟೆ ಬಸ್ ನಿಲ್ದಾಣವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದರು.

ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಇಂದಿನಿಂದ ಸೋಲೂರು ಜನರು ಆಡಳಿತಾತ್ಮಕವಾಗಿ ನೆಲಮಂಗಲ ತಾಲೂಕಿಗೆ ಸೇರಲಿದ್ದಾರೆ, ಎರಡೂ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು, ಸೋಲೂರಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇನೆ, ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ, ಮುಂದಿನ ದಿನಗಳಲ್ಲಿ ಸೋಲೂರಿ 42 ಸಾವಿರ ಜನತೆಗೂ ಸಿಹಿ ಹಂಚಿ, ಸೋಲೂರು ಉತ್ಸವ ಕೈಗೊಳ್ಳಲಿದ್ದೇವೆ ಎಂದರು.

ಜಿಲ್ಲಾಧಿಕಾರಿ ಡಾ.ಕೆ.ಅನುರಾಧ ಮಾತನಾಡಿ, ಸೋಲೂರು ಹೋಬಳಿಯ ಎಲ್ಲ ಮತಗಟ್ಟೆಗಳು, ಬೆಂ.ಗ್ರಾ.ಜಿಲ್ಲೆಗೆ ಒಳಪಡುತ್ತಿದ್ದುವು, ಸುಮಾರು 37 ಸಾವಿರದಿಂದ 42 ಸಾವಿತ ಜನಸಂಖ್ಯೆ, 6 ಪಂಚಾಯತಿ, ಜೊತೆಗೆ 15 ಸಾವಿರ ರೈತರು ಇದ್ದಾರೇ, ಭೂಮಿ ದಾಖಲಾತಿಗಳೇಲ್ಲಾ ಇನ್ನೊಂದು ವಾರದಲ್ಲಿ ಸಂಪೂರ್ಣ ಪ್ರತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸಿಗುತ್ತದೆ, ಡಿಜಿಟಲೀಕರಣಕ್ಕೆ ಒತ್ತು ನೀಡಿದ್ದೇವೆ ಎಂದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ