Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿಗಳಿಗೆ ಸಮಾನ ವೇತನ ಕೊಡುತ್ತೇವೆ ಎಂದು ನಾವು ಹೇಳಿದ್ದೇವೆ. ಅದರ ಕುರಿತು ಅತೀ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕೂ ನಿಗಮಗಳ ಬಹುತೇಕ ಎಲ್ಲ ನೌಕರರು ಸಮಾನ ವೇತನದ ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಸಾರಿಗೆ ನೌಕರರ ಕೆಲ ಸಂಘಟನೆಗಳು ಕೂಡ ಸರಿ ಸಮಾನ ವೇತನವನ್ನೇ ಕೊಡಬೇಕು ಎಂದು ನೂರಾರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಆದರೆ ಸಾರಿಗೆ ಕಾರ್ಮಿಕ ಸಂಘಟನಗೆಳ ಕೆಲವರು 4 ವರ್ಷಗಳಿಗೊಮ್ಮೆ ಆಗುವ ವೇತನ ಪರಿಷ್ಕರಣೆ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದರು .

ಇನ್ನು ಈ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡರೂ ನೌಕರರ ಹಿತದೃಷ್ಟಿಯಿಂದ ತೆಗೆದುಕೊಳ್ಳುತ್ತೇವೆ. ಕಾರಣ ಈವರೆಗೂ ಸಾರಿಗೆ ನೌಕರರಿಗೆ ಸಿಗಬೇಕಿರುವ ವೇತನ ಭಾರಿ ಕಡಿಮೆ ಇದೆ. ಹೀಗಾಗಿ ಒಳ್ಳೆ ತೀರ್ಮಾನವನ್ನೇ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಗದು ರಹಿತ ವೈದ್ಯಕೀಯ ಸೌಲಭ್ಯ: ಈಗಾಗಲೆ ಕೆಎಸ್‌ಞಾರ್‌ಟಿಸಿ ಸಿಬ್ಬಂದಿಗಳಿಗೆ ಈ ಯೋಜನೆ ಜಾರಿಯಾಗಿದ್ದು, ಸಿಬ್ಬಂದಿ ಅವಲಂಬಿತರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಡ್ರೈವರ್, ಕಂಡಕ್ಟರ್‌ಗಳು ಹಾಗೂ ಉಳಿದ ಸಿಬ್ಬಂದಿ ಪ್ರತಿ ತಿಂಗಳು ತಮ್ಮ ವೇತನದಿಂದಲೇ 650 ರೂಪಾಯಂತೆ ವರ್ಷಕ್ಕೆ 8 ಸಾವಿರ ರೂಪಾಯಿಗಳನ್ನು ಕಟ್ಟುತ್ತಾರೆ. ಹೀಗಾಗಿ ಅದೇ ಹಣವನ್ನು ಉಪಯೋಗಿಸಿಕೊಂಡು ಕ್ಯಾಶ್‌ಲೆಸ್ ಆರೋಗ್ಯ ಸೌಲಭ್ಯವನ್ನು ನೀಡಲಾಗುತ್ತಿದೆ.

ಈಗಾಗಲೇ 300ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ನಾವು ಒಡಂಬಡಿಕೆ ಮಾಡಿಕೊಂಡಿದ್ದೇವೆ. ಈ ಆಸ್ಪತ್ರೆಗಳಲ್ಲಿ ನಮ್ಮ ಸಿಬ್ಬಂದಿ ಹಣವಿಲ್ಲದೆ, ಅಂದರೆ ಕ್ಯಾಶ್ ಲೆಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಜತೆಗೆ ಉಳಿದ ಮೂರು ನಿಗಮಗಳಲ್ಲೂ ಏಪ್ರಿಲ್‌ ವೇಳೆಗೆ ಜಾರಿ ಆಗಲಿದೆ ಎಂದು ಸಚಿವರು ತಿಳಿಸಿದರು.

Leave a Reply

error: Content is protected !!
LATEST
ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ