Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಯಶಸ್ವಿಯಾಗಿ ಐದು ಗ್ಯಾರಂಟಿ ಯೋಜನೆಗಳ ಜಾರಿ ಮಾಡಿದ್ದೇವೆ :ಸಚಿವ ಕೆ‌ಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು , ನುಡಿದಂತೆ ನಡೆದಿದ್ದೇವೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್‌ನ ಹಳೇ ಬಸ್ ನಿಲ್ದಾಣದ ಬಳಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲ ಕುಟುಂಬಗಳು ಅಭಿವೃದ್ಧಿ ಕಾಣಬೇಕು ಎಂಬ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರಕಬೇಕು ಎಂದು ಕರೆ ನೀಡಿದರು.

ಇನ್ನು ಅರ್ಹ ಫಲಾನುಭವಿಗಳು ಯಾರು ಕೂಡ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು, ಯೋಜನೆಗಳ ಸೌಲಭ್ಯ ಸಿಗದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಿ, ಯೋಜನೆಗಳನ್ನು ತಲುಪಿಸಲು ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದ್ದು ಎಲ್ಲರೂ ನೋಂದಾಯಿಸಿಕೊಳ್ಳಲು ಕ್ರಮ ವಹಿಸಬೇಕು, ಮುಂದಿನ ದಿನಗಳಲ್ಲಿ ಹಲವು ಯೋಜನೆಗಳು ಜಾರಿಗೆ ತರುತ್ತೇವೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳಡಿ ದೇವನಹಳ್ಳಿ ತಾಲೂಕಿನಲ್ಲಿ 82 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಸಚಿವರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...