ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜವಹರಲಾಲ್ ನೆಹರು ತಾರಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಪ್ರಕೃತಿ ಯಾರ ಆಸ್ತಿಯಲ್ಲ. ಮಾನವ ಸೇರಿದಂತೆ ಎಲ್ಲ ಪ್ರಾಣಿಗಳು ಬದುಕುತ್ತಿರುವುದು ಪ್ರಕೃತಿಯಿಂದ. ನೀರು, ಗಾಳಿ, ಮರ, ಪರಿಸರಕ್ಕೆ ಜಾತಿ, ಧರ್ಮವಿಲ್ಲ. ಹಿಂದೆ ಹಳ್ಳಿಗಳಲ್ಲಿ ಮನೆಯಪಕ್ಕ ಸಣ್ಣ ತೋಟವಾದರೂ ಮಾಡಿಕೊಳ್ಳುತ್ತಿದ್ದೆವು. ನಂತರ ಮನೆ ಕಾಂಪೌಂಡ್ ಒಳಗೆ ತೆಂಗು, ಮಾವು, ಹಲಸಿನ ಮರ ಹಾಕುತ್ತಿದ್ದೆವು. ನಗರ ಪ್ರದೇಶಗಳಲ್ಲಿ ಜಾಗದ ಕೊರತೆಯಿಂದ ವಿವಿಧ ಸಣ್ಣಪುಟ್ಟ ಗಿಡಗಳನ್ನು ಬೆಳೆಸುತ್ತಿದ್ದೇವೆ” ಎಂದರು.
ನಮ್ಮ ಮಕ್ಕಳು ನಮ್ಮ ನಿಜವಾದ ಆಸ್ತಿ. ಅವರಿಗಾಗಿ ಭವಿಷ್ಯ ರೂಪಿಸಬೇಕು ಎಂದು ಮಕ್ಕಳಿಂದಲೇ ಒಂದೊಂದು ಗಿಡ ನೆಡಿಸಿ ಅವರೇ ಅವುಗಳನ್ನು ಬೆಳೆಸುವಂತೆ ಮಾಡಬೇಕು ಎಂಬುದು ನಮ್ಮೆಲ್ಲರ ಆಸೆ. ಹೀಗಾಗಿ ನಾನು ಬೆಂಗಳೂರು ನಗರದ ಸಚಿವನಾದ ಬಳಿಕ ಈ ಕಾರ್ಯಕ್ರಮವನ್ನು ನಡೆಸಲು ಆದೇಶ ನೀಡಲಾಯಿತು ಎಂದರು.
ಇನ್ನು ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ಶಾಲೆ ಒಂದೊಂದು ಪ್ರದೇಶ ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಶಾಲೆ ವಿದ್ಯಾರ್ಥಿಗಳಿಂದ ಗಿಡ ನೆಡಿಸಿ ಅದನ್ನು ಬೆಳೆಸಬೇಕು. ಆ ಗಿಡದ ಮೇಲೆ ಆ ಮಗುವಿನ ಹೆಸರು ಹಾಕಿಕೊಳ್ಳುವ ಅವಕಾಶ ನೀಡುವ ಕಾರ್ಯ ಆರಂಭಿಸಿದೆವು. ಈ ಕಾರ್ಯಕ್ರಮದ ಮೂಲಕ ಇಲ್ಲಿಯವರೆಗೂ 53 ಸಾವಿರ ಮಕ್ಕಳು ಗಿಡ ನೆಟ್ಟು ಅವುಗಳನ್ನು ಬೆಳೆಸುತ್ತಿದ್ದಾರೆ. ಈ ಪ್ರಕ್ರಿಯೆ ಹೀಗೆ ಮುಂದುವರಿಯಬೇಕು ಎಂದು ಹೇಳಿದರು.
ಇಂದು ಬೆಂಗಳೂರು ಹವಾಮಾನ ಕ್ರಿಯಾ ಕೋಶ (ಬೆಂಗಳೂರು ಕಾರ್ಯಯೋಜನೆ ಕ್ಲಬ್) ಆರಂಭಿಸಿದ್ದೇವೆ. ಈ ಕ್ಲಬ್ ನಲ್ಲಿ ಕನಿಷ್ಠ 10 ಜನ ಸದಸ್ಯರು ಇರಬೇಕು ಎಂದು ಪ್ರಸ್ತಾವನೆ ಬಂದಿತ್ತು. ಆದರೆ ನಾನು ಕನಿಷ್ಠ 25 ಸದಸ್ಯರು ಇರಬೇಕು ಎಂದು ತೀರ್ಮಾನ ಮಾಡಿದೆ. ಬೆಂಗಳೂರಿನಲ್ಲಿ ಸುಮಾರು 7 ಸಾವಿರ ಶಾಲೆಗಳಿವೆ. ಇಲ್ಲಿ ಆರಂಭಿಸಿದ ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಬಹುದು. ಬೆಂಗಳೂರು ಗಾರ್ಡನ್ ಸಿಟಿ ಎಂಬ ಹೆಸರು ಪಡೆದಿದ್ದು, ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಈ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ನೀಡಬೇಕು ಎಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು..

ನಾನು ಸರ್ಕಾರಿ ಶಾಲೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಕಾರ್ಯಕ್ರಮ ನಡೆಸುತ್ತಿದ್ದರು. ಇದನ್ನು ನೋಡಿ ನನಗೆ ಅಸಮಾಧಾನವಾಯಿತು. ಹೀಗಾಗಿ ಅವರಿಗೆ ನಾನು ಒಂದು ಸೂಚನೆ ನೀಡಿದೆ. ಮುಂದೆ ಬೆಂಗಳೂರಿನಲ್ಲಿ ಶಾಲೆಯಲ್ಲಿ ಕಾರ್ಯಕ್ರಮ ಮಾಡಿದರೆ ಅವುಗಳನ್ನು ಶಾಲಾ ಮಕ್ಕಳೇ ನಡೆಸಬೇಕು ಎಂದು ಮಾರ್ಗದರ್ಶನ ನೀಡಿದೆ. ಈ ಕಾರ್ಯಕ್ರಮವನ್ನು ಮಕ್ಕಳೇ ನಡೆಸುತ್ತಿದ್ದಾರೆ. ಆಮೂಲಕ ಅವರಲ್ಲಿ ನಾಯಕತ್ವ ಗುಣಬೆಳೆಸಬೇಕು ಎಂದು ಹೇಳಿದರು.
ಇಂದು ನಾವು ಬ್ಲೂ, ಗ್ರೀನ್ ಪ್ರಶಸ್ತಿ ನೀಡಿದ್ದೇವೆ. ಮುಂದೆ ಇದಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಹೆಚ್ಚು ಸ್ಪರ್ಧೆ ಏರ್ಪಡಲಿದೆ. ವಿವಿಧ ನಾಗರೀಕ ಸಂಘ ಸಂಸ್ಥೆಗಳು ಕೂಡ ಈ ವಿಚಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇಂದು 175 ಅರ್ಜಿಗಳು ಬಂದಿವೆ. ಮುಂದೆ 500-1000 ಅರ್ಜಿ ಬರಬಹುದು. ಶಾಲೆಗಳಲ್ಲಿನ ಕ್ಲಬ್ ಗಳಿಗೆ ಅಗತ್ಯ ನೆರವು ನೀಡಲಾಗುವುದು. ಈ ಕ್ಲಬ್ ಗಳ ಕಾರ್ಯಾಚರಣೆ ಕುರಿತ ಮಾರ್ಗಸೂಚಿ ಪುಸ್ತಕವನ್ನು ಇಂದು ನಾವು ಬಿಡುಗಡೆ ಮಾಡಿದ್ದೇವೆ. ನಿಮ್ಮ ಜತೆ ಎಲ್ಲಾ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ಕೆಲಸ ಮಾಡಲು ಇದನ್ನು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
“ಜೂ.5ರಂದು ಪರಿಸರ ದಿನವನ್ನು ಆಚರಿಸುತ್ತೇವೆ. ಯಾಕೋ ಏನೋ ಈ ಕಾರ್ಯಕ್ರಮವನ್ನು 6ರಂದು ನಡೆಸೋಣ ಎಂದು ಅಧಿಕಾರಿಗಳಿಗೆ ಹೇಳಿದ್ದೆ. ದುರ್ಘಟನೆ ಹಿನ್ನೆಲೆಯಲ್ಲಿ ಗುರುವಾರದಂದು ಸರ್ಕಾರದ ವತಿಯಿಂದ ಮಾಡಬೇಕಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ನಮ್ಮ ಜನ ಸಂಭ್ರಮಾಚರಣೆ ಸಮಯದಲ್ಲಿ ಶೋಕ ಆಚರಿಸುವಂತಾಯಿತು. ಇದರಿಂದ ನಾವೆಲ್ಲರೂ ನೋವಿನಲ್ಲಿದ್ದು, ಈ ವಿಚಾರವಾಗಿ ಹೆಚ್ಚು ವ್ಯಾಖ್ಯಾನ ಮಾಡುವುದಿಲ್ಲ” ಎಂದು ತಿಳಿಸಿದರು.
ಬೆಂಗಳೂರು ಸ್ವಚ್ಛತೆಗೆ ಕಾರ್ಯಕ್ರಮ: ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ಸ್ವಚ್ಛತೆಗೆ ರೂಪಿಸಿರುವ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಬೆಂಗಳೂರನ್ನು ಸ್ವಚ್ಛ ಮಾಡಲು ಜಿಬಿಎ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಸಾರ್ವಜನಿಕರು ಕಸ ಇರುವ ಸ್ಥಳಗಳನ್ನು ಫೋಟೋ, ವಿಡಿಯೋ ಮಾಡಿ ಆ ಸ್ಥಳದ ಲೊಕೇಶನ್ ಕಳುಹಿಸಿದರೆ ಪಾಲಿಕೆ ಅಧಿಕಾರಿಗಳು ಅವುಗಳನ್ನು ಸ್ವಚ್ಛ ಮಾಡಲಿದ್ದಾರೆ. ಪಾಲಿಕೆ ಪೌರಕಾರ್ಮಿಕರನ್ನು ಖಾಯಂಗೊಳಿಸಿದ್ದು, ಅವರು ಕೂಡ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಪಾಲಿಕೆ ಆಯುಕ್ತರಿಗೆ ಮಾರ್ಗದರ್ಶನ ನೀಡಿದ್ದೇನೆ” ಎಂದು ತಿಳಿಸಿದರು.
Related


You Might Also Like
ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಮುಳುಗಿದ ಹಲವು ಮನೆಗಳು- ಇಬ್ಬರು ನಾಪತ್ತೆ
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ನಲ್ಲಿ ಮಹಾಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಕಾರ್ಲಿಗಾಡ್ ನದಿಯಲ್ಲಿ...
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...