NEWSನಮ್ಮಜಿಲ್ಲೆ

ಬದಲಿ ಜಾಗದಲ್ಲಿ ಮನೆ ಕಟ್ಟಿಕೊಡ್ತೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು, ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪುಡಿಗಾಸು ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವ ಕೆಲಸ ಮಾಡಲಿ. ‌ನಮ್ಮ ಕೆಲಸ ನಾವು ಮಾಡುತ್ತೇವೆ‌ ಎಂದರು.

ಇನ್ನು ಈ ಹೆದ್ದಾರಿ ನಿರಂತರ ಕುಸಿಯುವ ಕೆಸರು ಪ್ರದೇಶ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿ ನೀಡಿದೆ. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತೇವೆ ಎಂದು ತಿಳಿಸಿದರು.

ಕುಸಿಯುವ ಗುಡ್ಡದ ಮಧ್ಯೆ ಎಸ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಕೆಲಸ ಮಾಡುತ್ತಿದೆ. ಜೆಸಿಬಿ, ಹಿಟಾಚಿ ಬಳಸಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದೇವೆ. ಅಲ್ಲದೆ ಮೃತರಿಗೆ ಘಟನೆ ನಡೆದ ಸಂಜೆ ಅದೇ ದಿನ 5 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಇನ್ನು ಬಲೆ ಬೋಟ್ ಕಳೆದು ಕೊಂಡ 59 ಕುಟುಂಬಗಳಿಗೆ 14 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ಇದೇ ವೇಳೆ ವಿವರಿಸಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ