Vijayapatha – ವಿಜಯಪಥ
Saturday, November 2, 2024
NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧದಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು

ಆಹ್ವಾನ ಇಲ್ಲದಿದ್ದರೂ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ಬಂದಿದ್ದಾರೆ ಎಂಬ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್‌ ಆಗಮಿಸಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೈತ ಹೋರಾಟಗಾರರು ವಾಗ್ವಾದಕ್ಕೆ ನಡೆಸಿದ ಪ್ರಸಂಗ ಇಂದು ಜರುಗಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಬ್ಬು ಬೆಲೆ, ಬಾಕಿ ಪಾವತಿ, ಬೆಳೆಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಚಿವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಭೆ ನಿಗದಿಪಡಿಸಿದ್ದರು. ಈ ವೇಳೆ ರೈತ ಹೋರಾಟಗಾರರು ಕೋಡಿಹಳ್ಳಿ ಚಂದ್ರಶೇಖರ್‌ ಭಾಗವಹಿಸಿದ್ದನ್ನು ಆಕ್ಷೇಪಿಸಿ, ಒಂದೋ ಅವರಿರಬೇಕು ಇಲ್ಲವೇ ನಾವಿರಬೇಕು ಎಂದು ಪಟ್ಟು ಹಿಡಿದು ಸಚಿವರಿಗೆ ಸ್ಪಷ್ಟಪಡಿಸಲು ಒತ್ತಾಯಿಸಿದರು.

ಇನ್ನು ಗುರುತರ ಆರೋಪ ಹೊತ್ತು ಕಳಂಕಿತರಾದ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ ಎಂದು ಕೂಗಾಡಿದರು. ಅಲ್ಲದೆ ಸಭೆ ಆರಂಭವಾಗುತ್ತಿದ್ದಂತೆ ರೈತ ಮುಖಂಡ ವಿಜಯ ಕುಮಾರ್ ಮಾತನಾಡಿ, ಸಭೆಯ ಆಹ್ವಾನಿತರ ಪಟ್ಟಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ನಮೂದು ಆಗಿಲ್ಲ. ಆಹ್ವಾನ ಇಲ್ಲದಿದ್ದರೂ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ಬಂದಿದ್ದಾರೆ. ಅವರ ವಿರುದ್ಧ ಆಪಾದನೆಗಳಿವೆ. ಈ ನಿಟ್ಟಿನಲ್ಲಿ, ಅವರು ಸಭೆಯಲ್ಲಿ ಭಾಗಿಯಾಗುವುದು ಗೌರವ ತರಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸಚಿವರಿಗೆ ಆಗ್ರಹಿಸಿದರು.

ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿ, ಆರೋಪದ ಕುರಿತು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿರುವೆ. ಯಾವುದೇ ತನಿಖೆ ನಡೆಸಿ, ನಾನು ಅಪರಾಧಿ ಎಂದು ಸರ್ಕಾರ ಘೋಷಣೆ ಮಾಡಿದರೆ ಶಿಕ್ಷೆಗೆ ಸಿದ್ದ. ಅದರ ಬದಲಾಗಿ, ವೈಯಕ್ತಿಕ ಭಿನ್ನಾಭಿಪ್ರಾಯವನ್ನು ಸಭೆಯಲ್ಲಿ ತರುವುದು ಸೂಕ್ತ ಅಲ್ಲ. ವಿಷಯದ ಕಡೆ ಗಮನ ನೀಡೋಣ ಎಂದು ಕೋರಿದರು.

ಈ ವಿಚಾರವಾಗಿ ರೈತರ ಎರಡು ಬಣಗಳ ಮಧ್ಯೆ ವಾಗ್ವಾದ ನಡೆಯಿತು. ರೈತ ಮುಖಂಡರಾದ ಸುನಂದಾ ಜಯರಾಂ ಇನ್ನಿತರರು ಮಧ್ಯೆ‌ ಪ್ರವೇಶಿಸಿ, ಸಭೆಯ ಮಹತ್ವ ಅರಿತು ವಿಷಯಗಳ ಚರ್ಚೆ, ಪರಿಹಾರ ಕಂಡುಕೊಳ್ಳೋಣ ಎಂದರು.

ಸಚಿವ ಶಂಕರ್ ಪಾಟೀಲ್ ಸಹ ಸಭೆಯಲ್ಲಿ ಗೊಂದಲ ಆಗುವುದು ಬೇಡ. ನಾವು ನಿಗದಿಪಡಿಸಿದ ವಿಚಾರದ ಬಗ್ಗೆ ಚರ್ಚೆ ಮಾಡೋಣವೆಂದು ವಿನಂತಿಸಿಕೊಂಡರು. ಬಳಿಕ ಎಲ್ಲರೂ ಸುಮ್ಮನಾದರು.

ಅರಿಯದ ಕಬ್ಬುದರ ನಿಗದಿ ಸರ್ಕಾರಕ್ಕೆ ಐದು ದಿನಗಳ ಅಂತಿಮ ಗಡುವು: ರಾಜ್ಯಾದ್ಯಂತ ಪ್ರಭಲಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಮನಗಂಡು ರಾಜ್ಯ ಸರ್ಕಾರ ಇಂದು ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ರೈತ ಪ್ರತಿನಿಧಿಗಳ ಸಭೆಯನ್ನು ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ.

ಈ ವೇಳೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು.

ಪಂಜಾಬ್ ರಾಜ್ಯದಲ್ಲಿ 3800 ರೂ. ಉತ್ತರ ಪ್ರದೇಶದಲ್ಲಿ 3500 ರೂ. ಗುಜರಾತ್‌ನಲ್ಲಿ 4400 ರೂ. ದರ ನಿಗದಿ ಮಾಡಿದ್ದಾರೆ ರಾಜ್ಯ ಸರ್ಕಾರವು ಅದನ್ನು ಗಮನಿಸಿ ರಾಜ್ಯ ಸಲಹಾ ಬೆಲೆಯನ್ನು ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ಮುಖಂಡರು ಒತ್ತಾಯಿಸಿದರು.

ಸಭೆಯಲ್ಲಿ ಸುನಂದ ಜಯರಾಮ್ ಕಬ್ಬು ಬೆಳೆಯುವ ರೈತರ ಸಂಕಷ್ಟವನ್ನು ವಿವರವಾಗಿ ತಿಳಿಸಿದರು. ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್, ಎಂ.ವಿ. ಗಾಡಿ, ತೇಜಸ್ವಿ ಪಟೇಲ್, ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200ಕ್ಕೂ ಹೆಚ್ಚು ರೈತ ಪ್ರತಿನಿಧಿಗಳು ಭಾಗವಹಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ