NEWSನಮ್ಮರಾಜ್ಯ

ಇಂದಿನಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ-2025ಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ ದಾಸ್ ಅವರ ವಿಚಾರಣಾ ಆಯೋಗ ರಚಿಸಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಪ.ಜಾತಿ ಒಳಮೀಸಲಾತಿ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು ಮೇ 5 -17ರವರೆಗೂ ರಾಜ್ಯದಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಇಂದು ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

ಇನ್ನು ಮೇ 5 ರಿಂದ 17 ರವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆ ಭೇಟಿ ನೀಡಿದ ಸಂಧರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ್ ಕಾರ್ಡ್, ಪರಿತರ ಚೀಟಿ, ಮೊಬೈಲ್ ನಂಬರ್, ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:9482300400 ಹಾಗೂ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್, ಅವರ ವಿಚಾರಣಾ ಆಯೋಗ ಸಹಾಯವಾಣಿ :9481359000 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಎಸ್‌.ಸಿ.ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ ಸೇರಿದಂತೆ ಹಲವರು ಇದ್ದರು.

Deva
the authorDeva

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ