NEWSನಮ್ಮಜಿಲ್ಲೆನಮ್ಮರಾಜ್ಯ

ಎಂಟು ವರ್ಷದ ರಾಜ್ಯದ ಜನ ಜಾತಿಗಣತಿ ವರದಿ ಏನಾಯಿತು: ಎಎಪಿ ರಾಜ್ಯಾಧ್ಯಕ್ಷ ಮು.ಚಂದ್ರು ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “1931ರಲ್ಲಿ ಜಾತಿ ಗಣತಿ ಆಗಿರುವುದು ಬಿಟ್ಟರೆ ಇದುವರೆಗೂ ಜಾತಿಗಣತಿ ಮಾಡಿಲ್ಲ. ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ಮಾಡಿಕೊಂಡು ಬಂದಿದ್ದಾರೆ. ಮೀಸಲಾತಿ ಇದೆ. ಆದರೆ, ಜಾತಿ ಗಣತಿಯೇ ಇಲ್ಲ. ಅಂದಾಜಿನ ಮೇಲೆ ಮೀಸಲಾತಿ ಕೊಡುತ್ತಾ ಬಂದಿದ್ದು, ಹಲವು ಸಮುದಾಯಗಳಿಗೆ ಅನ್ಯಾಯ ಆಗಿದೆ ” ಎಂದರು.

” ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 2013 ರಲ್ಲಿ ಶಾಶ್ವತ ಹಿಂದುಳಿದ ಆಯೋಗಕ್ಕೆ ರಾಜ್ಯದ ಜಾತಿಗಣತಿ ಮಾಡಲು ಆದೇಶ ನೀಡಿತು. ಇದಕ್ಕಾಗಿ 180 ಕೋಟಿ ರೂಪಾಯಿಗಳನ್ನು ಸಹ ಬಿಡುಗಡೆ ಮಾಡಿ ನಂತರ 2015 ರಲ್ಲಿ ಜಾತಿ ಗಣತಿ ವರದಿ ಸಂಪೂರ್ಣಗೊಂಡಿತು. ಅದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಾದ್ಯಂತ ಮನೆ ಮನೆಗೆ ತೆರಳಿ ಗಣತಿ ನಡೆಸಿತ್ತು. ದುರಂತ ಎಂದರೆ, ಆ ವರದಿಯನ್ನು ಆಯೋಗ ಇನ್ನೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿಎಂ ಆಗಿದ್ದ ಸಿದ್ದರಾಮಯ್ಯ ಅವರೇ ಆ ವರದಿಯನ್ನು ರಾಜಕೀಯ ಒತ್ತಡಗಳಿಂದ ಸ್ವೀಕರಿಸಲಿಲ್ಲ ಎಂದರು.

ಜಾತಿ ಗಣತಿ ಹೊರಗೆ ಬಂದರೆ ರಾಜಕೀಯದಲ್ಲಿ ಏರು ಪೇರು ಉಂಟಾಗಲಿದೆ ಎನ್ನುವ ಕಾರಣಕ್ಕೆ ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಕಾರ್ಯದರ್ಶಿಗಳು ವರದಿ ಸಿದ್ದವಾಗಿದೆ ಎಂದು ಸರ್ಕಾರಕ್ಕೆ ಪತ್ರ ಬರೆದರೂ, ವರದಿಯನ್ನು ತೆಗೆದುಕೊಂಡಿಲ್ಲ. 7 ಸದಸ್ಯರಲ್ಲಿ ಇಬ್ಬರು ಸಹಿ ಹಾಕಿಲ್ಲ. ಆಯೋಗದ ಅಧ್ಯಕ್ಷ ಕಾಂತರಾಜು ಅವರೇ ಸಹಿ ಹಾಕಿಲ್ಲ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ನವರ ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ವರದಿ ನೀಡಲು ಹೋದಾಗ ಕೂಡ ತೆಗೆದುಕೊಂಡಿಲ್ಲ ಎಂದು ಶಾಶ್ವತ ಆಯೋಗ ಹೇಳಿದೆ. ನಂತರ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕೂಡ ಈ ವರದಿಯನ್ನು ತೆಗೆದುಕೊಳ್ಳದೆ ತಿರಸ್ಕಾರ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಈಗಲಾದರೂ ಜಾತಿ ಗಣತಿ ವರದಿ ಬಹಿರಂಗಪಡಿಸಲಿ: ಈಗ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಆಗಿದ್ದಾರೆ. ಎಸ್‌ಟಿ ವರ್ಗಕ್ಕೇ ಸೇರಬೇಕೆನ್ನುವ ಒತ್ತಾಯವನ್ನು ಕುರುಬ ಸಮಾಜವೇ ಮಾಡಿದೆ. ಅದಕ್ಕಾಗಿ ಸುಮ್ಮನಾಗಿದ್ದಾರೆ ಎನಿಸುತ್ತದೆ. ಶಾಶ್ವತ ಸಮಿತಿ ಅಧ್ಯಕ್ಷ ಕಾಂತರಾಜು ಸ್ಥಾನಕ್ಕೆ ಈಗ ಜಯಪ್ರಕಾಶ್ ಹೆಗಡೆ ಬಂದಿದ್ದು, ನಾವು ಅವರನ್ನು ಭೇಟಿ ಮಾಡಿದಾಗ, ವರದಿ ಸಂಪೂರ್ಣವಾಗಿ ಸಿದ್ಧವಾಗಿದೆ. ನಾನು ಕೊಡಲು ಸಿದ್ಧ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಮೂರು ಬಾರಿ ಜಾತಿ ಗಣತಿ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ. ನವೆಂಬರ್ ಒಳಗಡೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಜಯಪ್ರಕಾಶ್ ಹೆಗಡೆ ನವೆಂಬರ್ ತಿಂಗಳಿನಲ್ಲಿ ನಿವೃತ್ತರಾಗುತ್ತಿದ್ದಾರೆ ಅದಕ್ಕೇ ಈ ರೀತಿ ಹೇಳಿಕೆ ನೀಡುತ್ತಿರಬೇಕು ಎಂದು ಅಭಿಪ್ರಾಯಪಟ್ಟರು.

ತುರ್ತಾಗಿ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ತೆಗೆದುಕೊಂಡು ವಿಧಾನಸಭೆಯಲ್ಲಿ ಮಂಡಿಸಲಿ, ನಂತರ ಜನ ಅದನ್ನು ತೀರ್ಮಾನ ಮಾಡುತ್ತಾರೆ. ಹಣ ಖರ್ಚು ಮಾಡಿ ಸಮೀಕ್ಷೆ ಮಾಡಿದ್ದಾರೆ, ಅದನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿಕೆ ನೀಡಲಿ ಎಂದರು.

ಒಂದು ವೇಳೆ ನವೆಂಬರ್ ಒಳಗೆ ಅವರು ಜಾತಿಗಣತಿ ವರದಿ ತೆಗೆದುಕೊಳ್ಳದಿದ್ದರೆ, ಸದನದಲ್ಲಿ ಮಂಡಿಸದೆ ಇದ್ದರೆ, ರಾಜ್ಯಪಾಲರಿಗೆ ವರದಿಯನ್ನು ನೀಡದೆ ಇದ್ದರೆ ಜನಾಂದೋಲನ ರೂಪಿಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು. ಮತಬ್ಯಾಂಕಿಗೆ ತೊಂದರೆಯಾಗುವ ಕಾರಣಕ್ಕೆ ಅವರು ಜಾತಿ ಗಣತಿ ವರದಿ ತೆಗೆದುಕೊಂಡಿಲ್ಲ ಎನ್ನುವ ಅನುಮಾನ ಇದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು