NEWSನಮ್ಮರಾಜ್ಯಸಂಸ್ಕೃತಿ

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ : ಮಾಜಿ ಸಿಎಂ ಎಚ್‌ಡಿಕೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾಎಸ್ವಾಮಿ ಕಿಡಿಕಾರಿದ್ದಾರೆ.

ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಸಾಂಸ್ಕೃತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್‌ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರವಾಗಲಿದೆ ಎಂದು ಹೇಳಿದ್ದಾರೆ.

ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಿದ್ದಾರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ ಎಂದು ಸರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು