NEWSನಮ್ಮರಾಜ್ಯಸಂಸ್ಕೃತಿ

ಸಮಾನತೆಗಾಗಿ ಶ್ರಮಿಸಿದವರು ಡಾ.ಬಿ.ಆರ್. ಅಂಬೇಡ್ಕರ್ :  ಜಿಲ್ಲಾಧಿಕಾರಿ ಆರ್.ಲತಾ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರು ತನ್ನ ಸ್ವಂತಕ್ಕೆ ಏನನ್ನೂ ಬಯಸದೆ, ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೂ ಸಮಾನ ಮೀಸಲಾತಿ ನೀಡಲು ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಇಂದು ನಡೆದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದರ ಫಲವಾಗಿ ನಾನು ಜಿಲ್ಲಾಧಿಕಾರಿಯಾಗಿರುವೆ ಎಂದು ಹೇಳಿದರಲ್ಲದೆ ಸದ್ಯದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಕೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ ಡಾ. ಭೀಮ್‌ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೆ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆಗಾಗಿ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ.

ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಎಂದು ತಿಳಿಸಿದರಲ್ಲದೆ ಅಂಬೇಡ್ಕರ್ ಅವರ ಸಂವಿಧಾನ ರಚನೆಯ ಫಲವಾಗಿ ನಾನು ಶಾಸಕನಾಗಿರುವೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಸಮಾಜದ ಮುಖಂಡರಾದ ಬುಳ್ಳಳ್ಳಿ ರಾಜಪ್ಪ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಹೋರಾಟಗಾರರು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ