NEWSನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿಯವರಿಗೇ ರಜೆ ಕೊಡುವ ಮಹಾಪುರಷ ಯಾರು ಸ್ವಾಮಿ…!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಹೇಳಿದ್ದಾರೆ.

ಆದರೆ, ಪ್ರಧಾನಿಯವರು ಯಾವ ಖಾಸಗಿ ಅಥವಾ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಹಾಜರಿ ನೋಡಿ ವೇತನಕೊಡುತ್ತಿರುವ ಮಾಲೀಕರು ಯಾರು ಎಂದು ಸಾಮಾನ್ಯ ಜನರು ಕೇಳುತ್ತಿದ್ದಾರೆ.

ಅಂದಹಾಗೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದಿರಿ ಭಾನುವಾರವು ಇವರ ಕಚೇರಿ ತೆರೆದಿರುತ್ತದೆಯೇ. ಇವರು ತಮ್ಮ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೆ ಪ್ರತಿದಿನವೂ ಕಚೇರಿಗೆ ಬಂದು ಸಹಿ ಮಾಡಿ ನಂತರ ಕೆಲಸಕ್ಕೆ ರಿಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆಯೇ ಎಂಬುದನ್ನು ದಯಮಾಡಿ ತಿಳಿಸಿ ಸ್ವಾಮಿ ಎಂದು ನಟ ಅನಂತ್ ನಾಗ್ ಅವರಲ್ಲಿ ಮನವಿ ಮಾಡಿದ್ದಾರೆ.

ಇನ್ನು ನೀವು ಮೋದಿ ಭಕ್ತ’ ಎಂದು ಹೇಳಿಕೊಳ್ಳುವುದು ನಿಮ್ಮ ವೈಯಕ್ತಿಕ ವಿಚಾರ, ಅದರ ಬಗ್ಗೆ ನಮ್ಮದೇನು ತಕಾರರು ಇಲ್ಲ. ಆದರೆ ಮೋದಿಯವರಿಗೆ ರಜೆ ಕೊಡುವ ಮಹಾ ನಾಯಕ ಯಾರು ಎಂದು ತಿಳಿದುಕೊಳ್ಳುವ ಕುತೂಹಲವನ್ನು ನಾವು ತಡೆದುಕೊಳ್ಳಲು ಆಗುತ್ತಿಲ್ಲ, ಹೀಗಾಗಿ ದಯಮಾಡಿ ಪ್ರಧಾನಿಯವರಿಗೇ ರಜೆ ಕೊಡುವ ಮಹಾಪುರುಷರ ಹೆಸರೇಳುತ್ತೀರಾ ಎಂದು ಕೇಳುತ್ತಿದ್ದಾರೆ.

ನಟ ಅನಂತ್ ನಾಗ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವೇ ನಮಗೆ ಸ್ಫೂರ್ತಿ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ ಎಂದು ಹೇಳಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?