NEWSಬೆಂಗಳೂರುರಾಜಕೀಯ

ಎಚ್‌ಡಿಕೆ ಸರ್ಕಾರ ಕೆಡವಿದ್ದು ಯಾರು ಎಂಬ ಚರ್ಚೆಗೆ ಪಂಥಾಹ್ವಾನ ನೀಡಿದ ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಬಿ ಟಿಂ ಜೆಡಿಎಸ್‌ ಎಂದು ಹೇಳುವವರು ಮೊದಲು ತಾವೇನು ಮಾಡಿದ್ದಾರೆಂಬುದನ್ನು ನೋಡಿಕೊಳ್ಳಿ. ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಅವರು ಸರ್ಕಾರವನ್ನು ಕೆಡವಿದ್ದು ಯಾರು ಎಂಬುದನ್ನು ಚರ್ಚೆ ಮಾಡೋಣ ಎಂದು ಪಂಥಾಹ್ವಾನ ನೀಡಿದ್ದಾರೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು.

ಇಂದು ಬೆಳಗ್ಗೆ  ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮೈತ್ರಿ ಹಿಂದಿನ ಉದ್ದೇಶ ಏನು ಎಂಬುದನ್ನು ಹೇಳಿದ್ದು, ಅಲ್ಲದೆ ಮುಸ್ಲಿಂ ಮುಖಂಡರು ಜೆಡಿಎಸ್‌ ತೊರೆಯುತ್ತಿರುವ ಬಗ್ಗೆ ಪ್ರಸ್ತಾಪ ಮಾಡುತ್ತಾ, ಮುಸ್ಲಿಂ ನಾಯಕರನ್ನು ಕಾಂಗ್ರೆಸ್‌ ಸೋಲಿಸಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಜತೆಗೆ ಕಾಂಗ್ರೆಸ್‌ ಮಾಡಿರುವ ಮೋಸದ ಬಗ್ಗೆ 100 ಕಾರಣಗಳನ್ನು ಹೇಳುವೆ ಎಂದು ದೇವೇಗೌಡರು ಗುಡುಗಿದ್ದಾರೆ.

ರಾಜ್ಯಸಭೆಯಲ್ಲಿ ಫಾರೂಕ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೆ, ಯಾರು ಸೋತರು? 8 ಜನ ನಾಯಕರನ್ನು ಕರೆದುಕೊಂಡು ಹೋದಿರಿ. ಅಲ್ಪಸಂಖ್ಯಾತರನ್ನು ಆ ದಿನ ಸೋಲಿಸಿದ್ದು ಯಾರು? ಜೆಡಿಎಸ್‌ಗೆ ಕಾಂಗ್ರೆಸ್ ಮೋಸ ಮಾಡಿರುವ 100 ಉದಾಹರಣೆಗಳನ್ನು ಕೊಡುತ್ತೇನೆ. ಕಾಂಗ್ರೆಸ್ ಹಲವಾರು ಬಾರಿ ಬ್ಲಂಡರ್ ಮಾಡಿದೆ. ನೀವು ಜಾತ್ಯತೀತ ಬಗ್ಗೆ ಮಾತನಾಡುತ್ತಿರಾ ಎಂದು ಪ್ರಶ್ನಿಸಿದ ಅವರು ನಾವು ಯಾವುದಕ್ಕೂ ಕೇರ್ ಮಾಡಲ್ಲ ಎಂದು ಹೇಳಿದರು.

ನಾವು ಕಳೆದ 60 ವರ್ಷದಿಂದ ಯಾವುದೇ ಸಮಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಸರ್ಕಾರದಲ್ಲಿದ್ದ 17 ಜನ ಶಾಸಕರನ್ನು ಮುಂಬೈಗೆ ಕರೆಸಿಕೊಂಡವರು ಯಾರು? ಇದೆಲ್ಲವೂ ಚರ್ಚೆಯಾಗಲಿ, ಚರ್ಚೆ ಮಾಡೋಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಸರ್ಕಾರನ್ನು ತೆಗೆದಿದ್ದು ಯಾರು? ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದಕ್ಕೆ ಅವಕಾಶ ಮಾಡಿದ ಬಗ್ಗೆ ಚರ್ಚೆ ಮಾಡೋಣ. ಯಾರು ಇದಕ್ಕೆ ಜವಾಬ್ದಾರಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದರು.

ಎಚ್‌ಡಿಕೆ ಸಿಎಂ ಮಾಡುವಂತೆ ಒತ್ತಾಯಿಸಿದ್ದು ಯಾರು?: ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕೆಂದು ಯಾರು ಬಂದಿದ್ದು? ನನಗೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡಿದರು. ಯಾವ ಕಾರಣಕ್ಕೂ ನಿಮ್ಮ ಸಹವಾಸ ಬೇಡ ಅಂತಾ ಹೇಳಿದ್ದೆ. ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಇವತ್ತು ಬಿಜೆಪಿ ಜತೆ ಸಂಬಂಧ ಯಾಕೆ ಬೆಳೆಸಿದ್ದೀರಿ ಎಂದು ಮಾಧ್ಯಮಗಳಲ್ಲಿ ಕೇಳುತ್ತಿದ್ದೀರಾ ಎಂದು ಪ್ರಶ್ನಿಸಿದರು.

ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ?: ನಾನು ಯಾವುದೇ ಕಾರಣಕ್ಕೂ ಅಧಿಕಾರಕ್ಕಾಗಿ ರಾಜಕೀಯ ಮಾಡಿಲ್ಲ. ರಾಹುಲ್ ಗಾಂಧಿ ಕೈಯಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಅಂತ ಹೇಳಿಸಿದರು. ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಾಗ ಏನ್ ಮಾಡಿದ್ರು ಅಂತ ನಾನು ನೋಡಲಿಲ್ವಾ? ಈಗ ಮೈತ್ರಿ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ? ನಾನು 10 ವರ್ಷದಲ್ಲಿ ಮೊದಲ ಬಾರಿ ಮೈತ್ರಿ ಬಗ್ಗೆ ಮಾತನಾಡಿದ್ದೇನೆ ಎಂದು ದೇವೇಗೌಡ ಹೇಳಿದರು.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭಾರತೀಯ ಜನತಾ ಪಾರ್ಟಿಯ ಜತೆ ಹೋಗಬೇಕಾದರೆ, ನಾನು ಮೊದಲು ಗೃಹ ಸಚಿವ ಅಮಿತ್‌ ಶಾ ಅವರ ಜತೆ ಚರ್ಚೆ ಮಾಡಿದ್ದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು