NEWSಮೈಸೂರುರಾಜಕೀಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ: ಸಿಎಂ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು ನಗರ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಈ ಪ್ರತಿಕ್ರಿಯೆ ನೀಡಿದರು.

ಇನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೋ ಗೊತ್ತಾಗುತ್ತಿಲ್ಲ ಎಂದರು.

ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ ಎಂದು ಹೇಳಿದರು.

ಇನ್ನು ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದು ಸಿಎಂ ಹೇಳಿದರು..‌

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ: ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!