NEWSನಮ್ಮರಾಜ್ಯರಾಜಕೀಯ

ಭ್ರಷ್ಟನಿಗೆ ಪದೇಪದೆ ಮಣೆ ಹಾಕುತ್ತಿರುವುದೇಕೆ?: ಶ್ಯಾಮ್ ಭಟ್ ನೇಮಕ ವಿರುದ್ಧ ಸಿಎಂ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದನ್ನು ಆಮ್‌ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಸುದ್ದಿಗಾರರೊಂದುಗೆ ಮಾತನಾಡಿದ ಅವರು, ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಬದಲಾವಣೆ ಬಯಸಿದ್ದರು. ಆದರೆ ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಎಂಬ ವಿವಾದಾತ್ಮಕ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯನನ್ನಾಗಿ ನೇಮಿಸುವ ಮೂಲಕ ಜನತೆಯ ನಂಬಿಕೆಗೆ ಚ್ಯುತಿ ತರುವಂತಹ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಆರಂಭಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ಆಯುಕ್ತರಾಗಿದ್ದ ಶ್ಯಾಮ್ ಭಟ್‌ ವಿರುದ್ದ, ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಗಂಭೀರ ಆರೋಪವಿದೆ.

ಬಿಡಿಎನಲ್ಲಿ ಸಾವಿರಾರು ಕೋಟಿಗಳ ಹಗರಣವನ್ನು ಮಾಡಿರುವ ಕುಖ್ಯಾತಿ ಇವರ ಮೇಲಿದೆ. ಕೆಐಎಡಿಬಿಯನ್ನು ಸಹ ತನ್ನ ಆಡುಂಬೋಲವನ್ನಾಗಿಸಿಕೊಂಡು, ಮನಸೋ ಇಚ್ಛೆ ಭ್ರಷ್ಟಾಚಾರವೆಸಗಿದ ಅನೇಕ ಪ್ರಕರಣಗಳನ್ನು ಆ ಸಂದರ್ಭದಲ್ಲಿ ಕಾಣಬಹುದಾಗಿತ್ತು. ಇಂತಹ ಅತಿ ಹೀನ ಕಳಂಕಿತ ಹಿನ್ನೆಲೆಯುಳ್ಳ ಅಧಿಕಾರಿಗೆ ಈಗ ಸರ್ಕಾರ ಹೊಸ ಜವಾಬ್ದಾರಿ ನೀಡಿರುವುದು ಸ್ವಾಗತಾರ್ಹವಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಅವರ ಅಧಿಕಾರವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಆರೋಪಗಳು ಕೇಳಿ ಬಂದಿತ್ತು.

ಇದೀಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವಾಗ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಶ್ಯಾಮ್ ಭಟ್‌ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ರಾಜ್ಯದ ಜನತೆ ಯಾವ ಮಾನವ ಹಕ್ಕುಗಳನ್ನು ಈ ವ್ಯಕ್ತಿ ರಕ್ಷಿಸುತ್ತಾನೆಂಬುದೇ ಯಕ್ಷಪ್ರಶ್ನೆ ಆಗಿದೆ. ಈತ ಮಾನವ ಹಕ್ಕು ಆಯೋಗವನ್ನು ಸಹ ತನ್ನ ಭ್ರಷ್ಟಾಚಾರಗಳಿಗೆ ಉಪಯೋಗಿಸಿಕೊಳ್ಳಲು ಹೇಸದ ವ್ಯಕ್ತಿ ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರಗಳಿಗೆ ಮಣೆ ಹಾಕುವ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಯಾವ ಸಂದೇಶವನ್ನು ನೀಡಲು ಹೊರಟಿದ್ದಾರೆ ಎಂದು ಪ್ರಶ್ನಿಸಿರುವ ಚಂದ್ರು ಅವರು, ಸಿದ್ದರಾಮಯ್ಯನವರು ಭ್ರಷ್ಟಾಚಾರದ ಪರವಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!