NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಏಕ ಸದಸ್ಯ ಸಮಿತಿ ಕೊಟ್ಟ ಕಾಲಕಾಲಕ್ಕೆ ಬಸ್ ದರ ಹೆಚ್ಚಿಸಬೇಕು ಎಂಬ ವರದಿ ಏಕೆ ತಿರಸ್ಕರಿಸಲಿಲ್ಲ: ಅಶೋಕ್‌ಗೆ ರಾಮಲಿಂಗಾರೆಡ್ಡಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ ಇದು ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೌಂಟರ್‌ ಕೊಟ್ಟಿದ್ದಾರೆ.

ಅಶೋಕ್ ಅವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು 2020ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ ಎಂದು ಕೇಳಿದ್ದಾರೆ.

ದಿನಾಂಕ: 15/11/2021 ರಲ್ಲಿ ಎಂ.ಆರ್ ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿಜೆಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ಎಂದು ರಾಮಲಿಂಗಾರೆಡ್ಡಿ ಅವರು ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದ್ದಾರೆ.

ಇಷ್ಟೇ ಅಲ್ಲ ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ ಎಂದು ಕೇಳಿದ್ದಾರೆ.

ಇನ್ನು ತಮ್ಮದೇ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ? ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ನಿಮ್ಮ ಮನಸ್ಥಿತಿಯೇ ತಿಳಿಯದಾಗಿದೆ ಎಂದು ಕುಟುಕಿದ್ದಾರೆ.

ಅಶೋಕ್ ಅವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ವ್ಯಂಗ್ಯಭರಿತವಾದ ಸಲಹೆ ನೀಡಿದ್ದಾರೆ.

1 Comment

  • ಸಾರ್ ಅಶೋಕ್ ಗೆ ಏನು ಗೊತ್ತು ಮಣ್ಣು, ಆತನಿಗೆ ಗೊತ್ತಿರೋದು ಒಂದೇ, ಅದು ಸಾರಿಗೆ ನೌಕರರನ್ನ ಹೇಗೆ ತುಳಿಯಬೇಕೆಂದು ಮಾತ್ರ. ಇಂತ ನಮಕ್ ಹರಾಮ್ ನಾಯಕರು ಏನಿದ್ದರೆ ಏನು ಪ್ರಯೋಜನ. ನಿಮ್ಮ ಕೆಲಸ ನೀವು ಮಾಡಿ, ಹಾಗೆಯೇ ನಿಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರಿ ಸಮಾನ ವೇತನ ಕೊಡಿ ಸಾಕು

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌