CRIMEನಮ್ಮಜಿಲ್ಲೆ

ಕುತ್ತಿಗೆಗೆ ಸೀರೆ ಬಿಗಿದ ಸ್ಥಿತಿಯಲ್ಲಿ ಪತ್ನಿ ಮೃತದೇಹ, ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಮೃತದೇಹ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಮುದ್ದೇಬಿಹಾಳ: ಕಾಲಿಗೆ ಹಾಗೂ ಕುತ್ತಿಗೆಗೆ ಸೀರೆ ಬಿಗಿದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಪತ್ನಿಯ ಮೃತದೇಹವಿದ್ದರೆ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತಿಯ ಮೃತದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿ ಸಿದ್ದಪ್ಪ ಹರನಾಳ ಹಾಗೂ ಆತನ ಪತ್ನಿ ಮೇಘಾ ಹರನಾಳ ಎಂಬುವರ ಶವಗಳೇ ಪತ್ತೆಯಾಗಿರುವುದು.

ಎಂಟು ವರ್ಷಗಳ ಹಿಂದೆ ಮೇಘಾ ಅವರನ್ನು ಸಿದ್ದಪ್ಪ ಹರನಾಳ ವಿವಾಹವಾಗಿದ್ದ. ದಂಪತಿಗೆ ಮುದ್ದಾದ ನಾಲ್ವರು ಮಕ್ಕಳಿದ್ದಾರೆ. ಆದರೆ, ಈಗ ಆ ಮಕ್ಕಳು ಅಪ್ಪ ಅಮ್ಮನ ಕಳೆದುಕೊಂಡು ಅನಾಥರಾಗಿದ್ದಾರೆ.

ಪತಿ ಸಿದ್ದಪ್ಪನೇ ಪತ್ನಿ ಮೇಘಾ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತ ಮೇಘಾಳ ತಾಯಿ ಗದ್ದೆಮ್ಮ ಹೊಸಮನಿ ಈ ಆರೋಪ ಮಾಡಿದ್ದಾರೆ.

ಸಿದ್ದಪ್ಪನ ತಾಯಿ ಶಾಂತಮ್ಮ ಹಾಗೂ ಸಹೋದರ ಶ್ರೀಕಾಂತ ಕಿರುಕುಳವೇ ಇದಕ್ಕೆ ಕಾರಣ ಎಂದು ಗದ್ದೆಮ್ಮ ದೂರಿದ್ದಾರೆ. ಕಳೆದ ಎರಡ್ಮೂರು ವರ್ಷಗಳಿಂದ ಸಿದ್ದಪ್ಪ ಹಾಗೂ ಮೇಘಾಳ ಸಂಸಾರದಲ್ಲಿ ಆಗಾಗ ಜಗಳವಾಗುತ್ತಿತ್ತು. ನಡುವೆ ರಾಜಿ ಪಂಚಾಯಿತಿ ಮಾಡಿ ಚೆನ್ನಾಗಿರಿ ಎಂದು ಹೇಳಿದ್ದೆವು. ಈಗ ನಮ್ಮ ಮಗಳನ್ನು ಕೊಲೆ ಮಾಡಿ ಅಳಿಯ ನೇಣಿಗೆ ಶರಣಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಾಲ್ವರು ಮಕ್ಕಳನ್ನು ಈಗ ಅನಾಥರನ್ನಾಗಿ ಮಾಡಿ ಹೋಗಿದ್ದಾರೆ ಎಂದು ಮೇಘಾಳ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಂಪತಿಯ ಜಗಳ ಇಬ್ಬರ ಪ್ರಾಣವನ್ನು ತೆಗೆಯುವ ಮಟ್ಟಕ್ಕೆ ಹೋಗಿರುವುದು ಮಾತ್ರ ಭಾರಿ ನೋವು ತರುತ್ತಿದೆ ಎಂದು ಗೋಳಾಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಬಾಲಣ್ಣ ನಂದಗಾವಿ ಹಾಗೂ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದ ಘಟನೆಯ ಕುರಿತು ಸತ್ತಾಂಶ ಹೊರಬೀಳಬೇಕಿದೆ.

ಇನ್ನು ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.

Deva
the authorDeva

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...