CrimeNEWSನಮ್ಮಜಿಲ್ಲೆ

ಹೆಂಡತಿ – ಸಡ್ಕನ ಅನೈತಿಕ ಸಂಬಂಧದ ಅನುಮಾನ ಮೈದುನನ ಕೊಲೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಮೈದುನನೊಂದಿಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡ ವ್ಯಕ್ತಿ ನಾದಿನಿಯ ಗಂಡನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಬಳಿಕ ಕಾರಿನಲ್ಲಿಟ್ಟು ಕಾರು ಸಹಿತ ಸುಟ್ಟು ಹಾಕಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಲ್ಲದೆ ಹೆಂಡತಿ ಮೇಲೆಯೂ ಮಾರಣಾಂತಿಕ ಹಲ್ಲೆಗೆ ಆರೋಪಿ ಯತ್ನಿಸಿದ್ದಾನೆ. ಯಾದಗಿರಿಯ ಸುರಪುರ ತಾಲೂಕಿನ ನಿವಾಸಿ ರವಿ ಕುಮಾರ್ (45) ಹತ್ಯೆಯಾದ ಮೆಡಿಕಲ್ ವ್ಯಾಪಾರಿ. ವಿಜಯ್ ಕುಮಾರ್ ಹತ್ಯೆ ಮಾಡಿದ ಆರೋಪಿ.

ಕೊಲೆ ಮಾಡಿದ ವಿಜಯ್‌ಕುಮಾರ್‌ ಮತ್ತು ಹತ್ಯೆಯಾದ ರವಿ ಕುಮಾರ್‌ ಇವರಿಬ್ಬರ ಪತ್ನಿಯರು ಸಹೋದರಿಯರು. ಹೀಗಾಗಿ ವಿಜಯ್ ಮತ್ತು ರವಿ ಸಡ್ಕರು. ಅಂದರೆ ವರಸೆಯಲ್ಲಿ ಸಹೋದರರಾಗುತ್ತಾರೆ. ವಿಜಯ್‌ ಪತ್ನಿ ನೀಲಮ್ಮಳ ಜೊತೆ ರವಿ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಇನ್ನು ಈ ವಿಷಯ ಗೊತ್ತಾಗುತ್ತಿದ್ದಂತೆ ಕೋಪಗೊಂಡಿದ್ದ ಆರೋಪಿ ಇಬ್ಬರನ್ನು ತನ್ನದೇ ಕಾರಿನಲ್ಲಿ ಕೂರಿಸಿಕೊಂಡು ಆಳಂದ ಪಟ್ಟಣದ ಹೊರವಲಯಕ್ಕೆ ಬಂದಿದ್ದಾನೆ. ಈ ವೇಳೆ ಕಾರಿನಲ್ಲೇ‌ ರವಿ ಜೊತೆ ಗಲಾಟೆ ತೆಗೆದು ಹಲ್ಲೆ ಮಾಡಿದ್ದಾನೆ. ಬಳಿಕ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಆ ನಂತರ ಮೃತದೇಹವನ್ನು ಕಾರಿನೊಳಗೆ ಹಾಕಿ ಬೆಂಕಿ ಇಟ್ಟು ಸುಟ್ಟು ಹಾಕಿದ್ದಾನೆ. ಇದೇ ವೇಳೆ ಹೆಂಡತಿ ಮೇಲೆಯೂ ಮಾರಾಣಾಂತಿಕ ಹಲ್ಲೆ ಮಾಡಿರುವ ಆರೋಪಿ ಕಲ್ಲಿನಿಂದ ಹೊಡೆದು, ಜಜ್ಜಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಮಹಿಳೆ ಬದುಕುಳಿದಿದ್ದಾಳೆ.

ಹತ್ಯೆ ಸಂಬಂಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿ ವಿಜಯ್ ಕುಮಾರ್​ನನ್ನ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ