CrimeNEWSನಮ್ಮಜಿಲ್ಲೆ

ಪ್ರಿಯಕರನ ಜೊತೆ ಸೇರಿ ಪತಿ ಕೊಲೆ : ಮೂರ್ಛೆ ರೋಗದಿಂದ ಮೃತಪಟ್ಟ ಎಂದು ಕಥೆ ಕಟ್ಟಿದ ಪತ್ನಿ, ಪ್ರಿಯಕರ ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿ ಮೂರ್ಛೆ ರೋಗದ ಕಥೆಕಟ್ಟಿದ ಚಾಲಾಕಿ ಪತ್ನಿ ಈಗ ಪ್ರಿಯಕರನ ಜತೆ ಕಂಬಿ ಎಣಿಸುತ್ತಿರು ಘಟನೆ ರಾಜ್ಯದ ರಾಜಧಾನಿಯಲ್ಲಿ ನಡೆದಿದೆ.

ಮಹೇಶ್ ಎಂಬುವರೆ ಪತ್ನಿಯಿಂದ ಮೃತಪಟ್ಟ ಅಮಾಯಕ. ಹೆಂಡತಿ ಶಿಲ್ಪಾ ಹಾಗೂ ಆಕೆಯ ಪ್ರಿಯಕರ ಸೇರಿ ಮೂರು ದಿನಗಳ ಹಿಂದೆ ಮಹೇಶ್ ಅವರನ್ನು ಕೊಲೆ ಮಾಡಿದ್ದರು. ನಂತರ ಮಂಡ್ಯಕ್ಕೆ ಮಹೇಶ್ ಶವವನ್ನು ತೆಗೆದುಕೊಂಡು ಹೋಗಿ ಮೂರ್ಛೆರೋಗ ಬಂದು ಮೃತೊಟ್ಟಿದ್ದಾರೆ ಎಂದು ಪತ್ನಿ ಶಿಲ್ಪಾ ಕಥೆ ಕಟ್ಟಿದ್ದಳು.

ಈ ಬಗ್ಗೆ ಅನುಮಾನಗೊಂಡು ಮಹೇಶ ಅವರ ಪಾಲಕರು ಮೃತ ದೇಹವನ್ನು ಪರಿಶೀಲನೆ ನಡೆಸಿದಾಗ ದೇಹದಲ್ಲಿ ಗಾಯಗಳ ಗುರುತು ಪತ್ತೆಯಾಗಿದೆ. ಈ ಕುರಿತಂತೆ ಕೂಡಲೇ ಮಂಡ್ಯ ಪೊಲೀಸರಿಗೆ ಮಾಹಿತಿ ನೀಡಿದಾರೆ.

ನಂತರ ಮಂಡ್ಯ ಪೊಲೀಸರು ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಹೇಶ್ ಕೊಲೆಯಾಗಿರುವುದು ದೃಢಪಟ್ಟಿದೆ. ಈ ಸಂಬಂಧ ಮಂಡ್ಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕೋಣನಕುಂಟೆ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಸದ್ಯ ಕೋಣನಕುಂಟೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಶಿಲ್ಪಾಳನ್ನು ಮಹೇಶ್ ಅವರು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಮಹೇಶ್ ದಂಪತಿ ವಾಸವಾಗಿದ್ದರು.

ಆದರೆ ಪತ್ನಿ ಶಿಲ್ಪಾ ಪರಪುರುಷನ ಜತೆ ಸಂಬಂಧ ಬಳೆಸಿಕೊಂಡು ಪತಿಯನ್ನೇ ಕೊಲೆ ಮಾಡಿ ಈಗ ಜೈಲು ಪಾಲಾಗಿದ್ದಾಳೆ. ಇದು ಇವಳಿಗೆ ಬೇಕಿತ್ತ ಎಂದು ಅಕ್ಕಪಕ್ಕದ ಮನೆಯವರು ಮತ್ತು ಸಂಬಂಧಿಗಳು ಚೀಮಾರಿ ಹಾಕುತ್ತಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್