CrimeNEWSನಮ್ಮಜಿಲ್ಲೆ

ಬೆಂಕಿ ಹಚ್ಚಿ ಕೊಲೆ ಮಾಡುವ ವೇಳೆ ಪತಿಯನ್ನೇ ತಬ್ಬಿಕೊಂಡ ಪತ್ನಿ ಮೃತ, ಪತಿ ಸ್ಥಿತಿ ಗಂಭೀರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ನಗರ: ತಡರಾತ್ರಿ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದು, ಸಾವಿಗೂ ಮುನ್ನ ಆಕೆ ಬೆಂಕಿಯಿಂದ ಪಾರಾಗಲು ಬೆಂಕಿ ಹಚ್ಚಿದ ತನ್ನ ಕಿರಾತಕ ಗಂಡನನ್ನೇ ಅಪ್ಪಿಕೊಂಡಿದ್ದಾಳೆ. ಆದರೂ ಆಕೆ ಮೃತಪಟ್ಟಿದ್ದು, ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ಗಂಡ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಈ ನೀಚಕೃತ್ಯ ನಡೆದಿರುವುದು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹರದನಹಳ್ಳಿಯಲ್ಲಿ. ಸೋಮವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ಪತ್ನಿ ರಾಜೇಶ್ವರಿ (28) ಬೆಂಕಿಗೆ ಆಹುತಿಯಾದವರು. ಕಿರಾತಕ ಪತಿ ಹರೀಶ್‌ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇತ್ತೀಚೆಗೆ ರಾಜೇಶ್ವರಿ ಮತ್ತು ಹರೀಶ್ ನಡುವೆ ಗಲಾಟೆ ನಡೆಯುತ್ತಿತ್ತು. ಸೋಮವಾರ ರಾತ್ರಿಯೂ ಜಗಳ ನಡೆದಿದ್ದು, ಕುಪಿತಗೊಂಡ ಹರೀಶ್, ಪತ್ನಿ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಚೀರಾಡಿಕೊಂಡೇ ಗಂಡನನ್ನು ಪತ್ನಿ ಬಿಗಿದಪ್ಪಿಕೊಂಡಿದ್ದಾಳೆ. ಪರಿಣಾಮ ಹರೀಶ್‌ಗೂ ಬೆಂಕಿ ವ್ಯಾಪಿಸಿದೆ.

ಇಬ್ಬರ ಚೀರಾಟ ಕೇಳಿ ಅಕ್ಕಪಕ್ಕದ ಮನೆಯವರು ಓಡಿಬಂದು ಬೆಂಕಿ ನಂದಿಸಿದ್ದಾರೆ. ರಾಜೇಶ್ವರಿ ಮೃತಪಟ್ಟಿದ್ದು, ಹರೀಶ್ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನು ವರದಕ್ಷಿಣೆಗಾಗಿ ಅಳಿಯ ಮತ್ತು ಆತನ ತಂದೆ- ತಾಯಿ ಸೇರಿಕೊಂಡು ಮಗಳು ರಾಜೇಶ್ವರಿಗೆ ಕಿರುಕುಳ ನೀಡುತ್ತಿದ್ದರು. ಈ ಹಿಂದೆ ಪೊಲೀಸ್ ಠಾಣೆಗೂ ದೂರು ನೀಡಲಾಗಿತ್ತು. ಹಲವು ಬಾರಿ ನ್ಯಾಯ ಪಂಚಾಯಿತಿ ಕೂಡ ಮಾಡಲಾಗಿತ್ತು ಎಂದು ರಾಜೇಶ್ವರಿ ತಂದೆ ಸೋಮಶೇಖರ್ ದೂರು ನೀಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...