CrimeNEWSನಮ್ಮಜಿಲ್ಲೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ: ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಪೊಲಿಸರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸೋಮಶೇಖರ್ ಮತ್ತು ಅವರ ಕುಟುಂಬದವರ ವಿರುದ್ದ ಪತ್ನಿ ಸಹನಾ ಪಟ್ಟಣದ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ನೀಡಿದ್ದರೂ ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹನಾ, 2023ರ ಮೇ 29 ರಂದು ಸೋಮಶೇಖರ್ ಜೊತೆ ನನ್ನ ವಿವಾಹ ಪಟ್ಟಣದ ಕನಕ ಸಮುದಾಯ ಭವನದಲ್ಲಿ ನಡೆದಿತ್ತು.

ಮದುವೆಯಾದ ಎರಡು ತಿಂಗಳುಗಳು ಪತಿ ಜತೆ ಅನ್ಯೋನ್ಯವಾಗಿದ್ದೆ. ಆ ನಂತರ ನಮ್ಮ ಮಾವ ಈಶ್ವರಯ್ಯ, ಅತ್ತೆ ರಾಜಮ್ಮ, ಭಾವ ಶಿವಕುಮಾರ್, ಸೋದರ ಮಾವ ಬಸವರಾಜು ಹಾಗೂ ಆತನ ಹೆಂಡತಿ ಮಹದೇವಮ್ಮ ಅವರು ಈ ಹಿಂದೆ ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ನೀಡಿದ್ದರೂ ಹೆಚ್ಚುವರಿಯಾಗಿ ಮನೆಯಿಂದ ವರದಕ್ಷಿಣೆ ತರುವಂತೆ ಪತಿ ಸೋಮಶೇಖರ್ ಜೊತೆಗೂಡಿ ನನಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದರು.

ಅಲ್ಲದೆ ಹಲವು ಬಾರಿ ದಿಂಬನ್ನು ಬಳಸಿ ನನ್ನನ್ನು ಉಸಿರುಗಟ್ಟಿಸಿ ಹಾಗೂ ವಿಷಕಾರಿ ಮಾತ್ರೆಯನ್ನು ಬಲವಂತವಾಗಿ ಕುಡಿಸಿ ಕೊಲ್ಲಲು ಯತ್ನಿಸಿದ್ದಾರೆ. ಹಾಗಾಗಿ ಪತಿ ಹಾಗೂ ಇತರರ ವಿರುದ್ಧ ಕ್ರಮ ಜರುಗಿಸುವಂತೆ ಜೂನ್ 4 ರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನನಗೆ ನ್ಯಾಯ ನೀಡುವ ಬದಲಾಗಿ ಅವರನ್ನು ರಕ್ಷಿಸುವ ಸಲುವಾಗಿ ನಿಂತಿದ್ದಾರೆ ಎಂದು ಸಹನಾ ದೂರಿದ್ದಾರೆ.

ಇನ್ನು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್ಪಿಯವರಿಗೆ ಮನವಿ ಮಾಡಿದ್ದೇನೆ. ಇಲ್ಲಿನ ಸ್ಥಳೀಯ ಪೊಲೀಸರು ಆರೋಪಿಗಳನ್ನು ಶೀಘ್ರದಲ್ಲೇ ಬಂದಿಸದಿದ್ದರೆ ತಾಲೂಕಿನ ವಿವಿಧ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳೊಂದಿಗೆ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಹನಾ ತಂದೆ ರಮೇಶ್ ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ