CrimeNEWSನಮ್ಮಜಿಲ್ಲೆ

ಮಹಿಳೆ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಅನ್ನುವ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದರು ಎಂಬ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿದ್ದ ಪೀಠ 5 ಲಕ್ಷ ರೂ.ಗಳ ಬಾಂಡ್‌, ಇಬ್ಬರು ಶ್ಯೂರಿಟಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದೆ.

ಇಂದು (ಸೋಮವಾರ) ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುದೀರ್ಘ ವಿಚಾರಣೆ ನಡೆಸಿತು. ವಿಶೇಷ ತನಿಖಾ ತಂಡ (SIT) ಪರ ವಕೀಲರು ರೇವಣ್ಣ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶ ಮಾಡುವ ಆತಂಕವಿದೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದರು.

ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ರೇವಣ್ಣ ಪ್ರಕರಣದಲ್ಲಿ ಇಲ್ಲಿ ಯಾವುದೇ ಸತ್ಯ ಮತ್ತು ಸಾಂದರ್ಭಿಕ ಸಾಕ್ಷಿಗಳಿಲ್ಲ. ರೇವಣ್ಣ ಮನೆಯಲ್ಲಿ ಮಹಿಳೆ 10 ವರ್ಷಗಳು ಕೆಲಸ ಮಾಡಿದ್ದಾರೆ. ಹೀಗಾಗಿ ಯಾವುದೇ ಅಪಹರಣ ಮಾಡಿಲ್ಲ. ಜಾಮೀನು ನೀಡಬಹುದು ಎಂದು ರೇವಣ್ಣ ಪರ ವಕೀಲ ನಾಗೇಶ್‌ ವಾದಿಸಿದರು.

ಎರಡು ಕಡೆಯ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸಂಜೆ 4 ಗಂಟೆಗೆ ವಿಚಾರಣೆ ಪೂರ್ಣಗೊಳಿಸಿ ಸಂಜೆ 6:30ಕ್ಕೆ ಆದೇಶ ಪ್ರಕಟಿಸಿದರು.

ಮೇ 8 ರಂದು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಈ ಆದೇಶದ ಅನ್ವಯ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ವಿಚಾರಣಾಧೀನ ಕೈದಿಯಾಗಿ ಹೋಗಿದ್ದರು. ಮಂಗಳವಾರ ಸಂಜೆ ರೇವಣ್ಣ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ