CRIMENEWSಮೈಸೂರು

ತಿ.‌ನರಸೀಪುರ: ಸಚಿವ ಮಹದೇವಪ್ಪ ಹೆಸರಲ್ಲಿ 27 ಲಕ್ಷ ರೂ. ವಂಚನೆ: ಮಹಿಳೆ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ತಿ.‌ನರಸೀಪುರ : ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಮೈಸೂರು ಜಿಲ್ಲೆಯ ತಿ.‌ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ.

ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಾಲ ಕೊಡಿಸುವುದಾಗಿ ನಂಬಿಸಿ ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ ನೂರಾರು ಮಹಿಳೆಯರು ಮತ್ತು ಯುವಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಇನ್ನು ಬರೋಬ್ಬರಿ 27 ಲಕ್ಷ ರೂ. ವರೆಗೆ ಹಣ ವಂಚಿಸಿದ್ದಾಳೆ ಎಂದು ಆರೋಪಿಸಿರುವ ಗ್ರಾಮಸ್ಥರು ತಲಕಾಡು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು ಎಂದು ಪೊಲೀಸರಿಗೆ ಮೊರೆ ಇಟ್ಟಿದ್ದಾರೆ.

ಈ ಸಂಬಂಧ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು ತನಿಖೆಗೆ ತಯಾರಿ ನಡೆಸಿದ್ದು, ಆರೋಪಿತ ಮಹಿಳೆಯ ವಿಚಾರಣೆ ಮಾಡಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದಾಗಿದೆ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ