NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ಸಾರಿಗೆ ಬಸ್‌ನಲ್ಲಿ ಸೀಟ್‌ಗಾಗಿ ನಾರಿಯರ ಕಾದಾಟ- ಕೈಗೆ ಬಂದ ಪಾದರಕ್ಷೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಸೀಟ್‌ಗಾಗಿ ಮಹಿಳೆಯರ ನಡುವೆ ಜಗಳ ನಡೆದ ಘಟನೆ ಜರುಗಿದೆ.

ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ – ಬೆಳಗಾವಿ ಮಾರ್ಗದ ನಡುವೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಇಬ್ಬರು ಮಹಿಳೆಯರು ಒಂದು ಸೀಟ್‌ಗಾಗಿ ಹಲವು ನಿಮಿಷಗಳ ಕಾಲ ಕಿತ್ತಾಡಿಕೊಂಡಿದ್ದಾರೆ.

ವಿಡಿಯೋದಲ್ಲಿ ಇರುವಂತೆ ನಿಂತುಕೊಂಡ ಮಹಿಳೆ ಮತ್ತು ಬಾಲಕಿ ಹಾಗೂ ಸೀಟ್​ನಲ್ಲಿ ಕುಳಿತುಕೊಂಡ ಮಹಿಳೆ ನಡುವೆ ಜಗಳ ನಡೆದಿದೆ.

ಈ ವೇಳೆ ಸೀಟ್​ನಲ್ಲಿದ್ದ ಮಹಿಳೆ ತನ್ನ ಚಪ್ಪಲಿಯಿಂದ ಇಬ್ಬರಿಗೆ ಹೊಡೆದಿದ್ದಾಳೆ. ಈ ವೇಳೆ ಹೊಡೆತ ತಿಂದ ಇಬ್ಬರು ಕಿರುಚಾಡಿ ಕಣ್ಣೀರು ಹಾಕಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪುರುಷ ಪ್ರಯಾಣಿಕರು, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ಮಹಿಳೆಯರ ಉಚಿತ ಬಸ್‌ ಪ್ರಯಾಣ ಜಾರಿಯಾದ ಬಳಿಕ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಇದರಿಂದ ಚಾಲನಾ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!