NEWSನಮ್ಮಜಿಲ್ಲೆನಮ್ಮರಾಜ್ಯ

ಟಿಕೆಟ್‌ ಪಡೆಯದ ಮಹಿಳೆಯರಿಗೆ ದಂಡಹಾಕುವಂತಿಲ್ಲ, ಆದರೆ ಕಂಡಕ್ಟರ್‌ ವಿರುದ್ಧ ಕ್ರಮ ಆಗಲೇಬೇಕು – ಅಚ್ಚರಿಯ ಆದೇಶ ಹೊರಡಿಸಿದ KKRTC

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಒದಗಿಸಿದ ಶಕ್ತಿ ಯೋಜನೆ ದುರುಪಯೋಗವಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಅಂದರೆ, ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಹರಿಯುವುದು, ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ನಿರ್ವಾಹಕರು ಎಂಬ ಬಗ್ಗೆ ದೂರುಗಳು ಕೇಳಿಬಂದಿದ್ದು, ಹೀಗಾಗಿ ಆ ರೀತಿ ಹೆಚ್ಚುವರಿ ಟಿಕೆಟ್‌ಗಳನ್ನು ಸುಖ ಸುಮ್ಮನೆ ಹರಿಯುವಂಥ ನಿರ್ವಾಹಕರ ವಿರುದ್ಧ ತಂಡ ಸಹಿತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಬಸ್​ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಲಾಗುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಕೆಎಸ್​ಆರ್​ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ನಿರ್ವಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ಆದೇಶ ಹೊರಡಿಸಿವೆ.

ಇನ್ನು ಇಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಉಚಿತ ಟಿಕೆಟ್ ನೀಡದಿದ್ದರೂ ಕಂಡಕ್ಟರ್​​ಗಳು ದಂಡ ಕಟ್ಟಬೇಕು. ಅಲ್ಲದೆ ಹೆಚ್ಚು ಟಿಕೆಟ್‌ಗಳನ್ನು ಹರಿದರೂ ಕಂಡಕ್ಟರ್​​​ಗಳು ಶಿಕ್ಷೆ ಅನುಭವಿಸಬೇಕು. ಜತೆಗೆ ಮಹಿಳೆಯರು ಉಚಿತ ಟಿಕೆಟ್‌ ಪಟಡೆದಿಲ್ಲ ಎಂದರೆ ಅವರ ವಿರುದ್ಧ ಮಾತ್ರ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂಬ ಆದೇಶವನ್ನು ಕೆಕೆಆರ್​​ಟಿಸಿ ಈಗಾಗಲೇ ಹೊರಡಿಸಿದೆ.

ಈ ಆದೇಶದಲ್ಲಿ ಸರಿ ತಪ್ಪುಗಳು ಎರಡು ಇವೆ. ಅಂದರೆ ಇಲ್ಲಿ ಗರಗದ ಬಾಯಿ ಸಿಲುಕುವುದು ನಿರ್ವಾಹಕರು ಮಾತ್ರ. ಟಿಕೆಟ್‌ ಪಡೆಯದಿರುವ ಮಹಿಳೆಯರಿಗೆ ಯಾವುದೇ ರೀತಿ ದಂಡವಿಲ್ಲ ಎಂದಾದರೆ ಎಷ್ಟೋ ಜನ ಮಹಿಳೆಯತು ಉದಾಸೀನತೆಯಿಂದ ನಡೆದುಕೊಳ್ಳುತ್ತಾರೆ. ಜತೆಗೆ ನಿರ್ವಾಹಕರನ್ನು ಕೀಳಾಗಿ ಕಾಳುತ್ತಾರೆ ಎಂಬ ಬಗ್ಗೆ ಈ ಆದೇಶ ಹೊರಡಿಸಿರುವ ಅಧಿಕಾರಿಗೆ ಕಿಂಚಿತ್ತು ಅರಿವಿಲ್ಲ ಎಂಬಂತೆ ಕಾಣುತ್ತಿದೆ.

ಇನ್ನು ನಿರ್ವಾಹಕರಿಗೆ ನೀಡುವ ಶಿಕ್ಷೆ ಏನು?: ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸಾರಿಗೆ ನಿಗಮದ ನಿಯಮ 22ರಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದು. 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು. ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದು.

2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು. ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನ್ಯತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮಕೈಗೊಳ್ಳುವುದು ಎಂದು ಆದೇಶ ಹೊರಡಿಸಿದ್ದಾರೆ. ಇದು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ನಿರ್ವಾಹಕರ ಮೇಲೆ ಕೆಲ ಮಹಿಳಾ ಪ್ರಯಾಣಿಕರು ದರ್ಪ ತೋರುವುದಕ್ಕೆ ಅನುಕೂಲ ಮಾಡಿಕೊಟ್ಟಂತೆ ಇದೆ.

ಇನ್ನು ಶಕ್ತಿ ಯೋಜನೆ ಜಾರಿಯ ನಂತರ ರಾಜ್ಯದ ಸಾರಿಗೆ ನಿಗಮಗಳ ಬಸ್​ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದಾರೆ. ನಂತರದಲ್ಲಿ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಬಗ್ಗೆಯೂ ಆರೋಪಗಳು ಕೇಳಿಬಂದವು. ಇದರ ಬೆನ್ನಲ್ಲೇ ನಿಗಮಗಳು ಈಗ ಸಂಸ್ಥೆಯ ನೌಕರರಿಗೆ ಮಾತ್ರ ಬರೆಹಾಕಲು ಹೊರಟಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುವುದಕ್ಕೆ ಆದೇಶ ಹೊರಡಿಸಿರುವ ಅಧಿಕಾರಿಯೇ ಸ್ಪಷ್ಟನೆ ನೇಡಬೇಕಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ