NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮೋಸದ ನಡೆ: 2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಲ್ಲ – ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭೆಯಲ್ಲಿ ಮಂಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮವು ಕೇಂದ್ರ ಸರ್ಕಾರದ ಮೋಸದ ನಡೆಯಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರಗೊಂಡರೂ 2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಲು ಸಾಧ್ಯವಿಲ್ಲ ಎಂದು ಆಮ್‌ ಆದ್ಮಿ ಪಕ್ಷದ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಪ್ರತಿಪಾದಿಸಿದ್ದಾರೆ.

ಮಹಿಳಾ ಮೀಸಲಾತಿ ವಿಚಾರವಾಗಿ ಬೆಂಗಳೂರಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಶಲಾ ಸ್ವಾಮಿ, ಮಸೂದೆಯಲ್ಲಿ ಸೇರಿಸಲಾಗಿರುವ ಕ್ಷೇತ್ರ ಮರು ವಿಂಗಡಣೆ ಮತ್ತು ಗಣತಿ ನಿಬಂಧನೆಗಳನ್ನು ತೆಗೆದು 2024ರ ಲೋಕಸಭೆ ಚುನಾವಣೆಗೂ ಮುನ್ನವೇ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ ಇದು. ಮಸೂದೆಯ ನಿಬಂಧನೆಗಳನ್ನು ಸೂಕ್ಷ್ಮವಾಗಿ ಓದಿದರೆ ಬಿಜೆಪಿಯ ಕಳ್ಳಾಟ ಬಹಿರಂಗವಾಗುತ್ತದೆ. ಮಸೂದೆ ಪ್ರಕಾರ, ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಮುಗಿಸಿದ ಬಳಿಕ ಸಮೂದೆ ಜಾರಿಗೆ ಬರಲಿದೆ. ಅದಾದ ಬಳಿಕ, 15 ವರ್ಷಗಳ ವರೆಗೆ ಜಾರಿಯಲ್ಲಿರಲಿದೆ. ಮಹಿಳೆಯರ ಯೋಗಕ್ಷೇಮ ಮತ್ತು ಮಹಿಳೆಯರ ಕಲ್ಯಾಣದ ಬಗ್ಗೆ ಬಿಜೆಪಿಗೆ ಆಸಕ್ತಿ ಇದ್ದರೆ ಕ್ಷೇತ್ರ ಮರು ವಿಂಗಡಣೆ ಮತ್ತು ಗಣತಿ ನಿಬಂಧನೆಗಳನ್ನು ಜಾರಿಗೊಳಿಸಲಿ ಎಂದು ಸವಾಲು ಹಾಕಿದರು.

2024ರ ಲೋಕಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಆದರೆ ಈ ಬಿಲ್‌ ಅನುಷ್ಠಾನಗೊಳಿಸಬೇಕು ಎಂದರೆ ಮೊದಲು ಜನಗಣತಿ ನಡೆಸಬೇಕು. ಜನಗಣತಿಯ ವರದಿ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆಯಾಗುತ್ತದೆ. ಕ್ಷೇತ್ರ ಮರುವಿಂಗಡಣೆ ಆಧಾರದ ಮೇಲೆ ಮಹಿಳೆಯರಿಗೆ ಮೀಸಲಾತಿ ನೀಡಬೇಕಾಗುತ್ತದೆ.

ಜನಗಣತಿಯನ್ನು ನಡೆಸಲು ಏನೆಲ್ಲವೆಂದರೂ 1 ವರ್ಷ ಹಿಡಿಯುತ್ತದೆ. ಆದಾದ ನಂತರ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ದೆಹಲಿಯ ಮುನ್ಸಿಪಾಲಿಟಿ ಕಾರ್ಪೋರೇಷನ್‌(ಎಂಸಿಡಿ) ನಂತಹ ಸಣ್ಣ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಚುನಾವಣಾ ಆಯೋಗವು ಕನಿಷ್ಠ 6 ತಿಂಗಳನ್ನು ತೆಗೆದುಕೊಂಡಿದೆ.

ಇನ್ನು ಇಡೀ ದೇಶದಲ್ಲಿ ಡಿಲಿಮಿಟೇಶನ್‌ ಪ್ರಕ್ರಿಯೆ ಪೂರ್ಣಗೊಳಿಸಲು 2 ವರ್ಷ ಬೇಕಾಗುತ್ತದೆ. ವಿಚಾರ ಹೀಗಿರುವಾಗ ದಿಢೀರ್‌ ಆಗಿ ಮಹಿಳೆಯರಿಗೆ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದು ಏಕೆ? ಇದರ ಹಿಂದೆ ಸದುದ್ದೇಶಕ್ಕಿಂತ ದುರುದ್ದೇಶವೇ ಹೆಚ್ಚಿದೆ. ಕೇವಲ ಚನಾವಣೆಯಲ್ಲಿ ಮಹಿಳೆಯರನ್ನು ಮೀಸಲಾತಿ ಹೆಸರಲ್ಲಿ ವಂಚಿಸಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಕುಶಾಲಾ ಸ್ವಾಮಿ ಆರೋಪಿಸಿದರು.

ಇದು ಒಂದು ರೀತಿಯಲ್ಲಿ ದಿನಾಂಕವನ್ನೇ ಗೊತ್ತು ಮಾಡದೆ ಮದುವೆ ಮಾಡಿಸುತ್ತೇವೆ ಎಂದು ಹೇಳಿದಂತಿದೆ. ಈ ಮಸೂದೆ ಎಂದಿನಿಂದ ಜಾರಿಗೆ ಬರುತ್ತದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು. ಮುಂಬರುವ ಚುನಾವಣೆಯಲ್ಲಿ ಮೀಸಲಾತಿ ಒದಗಿಸುವುದು ಅಸಾಧ್ಯ ಎಂಬಂತಿರುವಾಗ ತರಾತುರಿಯಲ್ಲಿ ಈ ಮಸೂದೆ ಮಂಡಿಸುವ ಜರೂರತ್ತು ಏನಿತ್ತು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು