Please assign a menu to the primary menu location under menu

CrimeNEWSನಮ್ಮಜಿಲ್ಲೆ

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ ಇಂದು ಸಂಜೆ ಬಂಧಿಸಿದ್ದಾರೆ.

ಬೆಂಗಳೂರು ಜಾರಿಬಂಡೆ ಕಾವಲ್‌ನ ಅರಣ್ಯ ಘಟಕದಲ್ಲಿ ತಲೆಮರೆಸಿಕೊಂಡಿದ್ದ ವಿಕ್ರಂ ಸಿಂಹನನ್ನು ಬೆಂಗಳೂರು ಪೊಲೀಸರ ಸಹಕಾರದಿಂದ ಬಂಧಿಸಿರುವ ಅರಣ್ಯಾಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಬೇಲೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದು ಸಾಗಿಸಿದ ಆರೋಪದಡಿ ವಿಕ್ರಂ ಸಿಂಹ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

ಏನಿದು ಪ್ರಕರಣ?: ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...