ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು ಗ್ರಾಮಾಂತರ: ಲೈಂಗಿಕ ದೌರ್ಜನ್ಯ / ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿ, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗ, ನವದೆಹಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 5 ಶನಿವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶೈಲ್ ಬಾಗಾಡಿ ನಡೆಸಿಕೊಡಲಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಡಾ.ನಾಗಲಕ್ಷ್ಮೀ ಚೌಧರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹಾಗೂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿರುವರು.
Related
