NEWSಕ್ರೀಡೆದೇಶ-ವಿದೇಶ

ವಿಶ್ವಕಪ್ 2023ರ ಪಂದ್ಯ: ಹೆಡ್‌ ಅಬ್ಬರಕ್ಕೆ ನುಚ್ಚುನೂರಾದ ಭಾರತದ ವಿಶ್ವಕಪ್‌ ಕನಸ್ಸು

ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್: ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ನಿಗದಿತ ಓವರ್‌ಗಳಲ್ಲಿ 240 ರನ್ ಗಳಿಗೆ ಆಲೌಟ್ ಆಗಿತ್ತು.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಟ್ರಾವಿಸ್​ ಹೆಡ್​ (137 ರನ್​ 120 ಎಸೆತ 15 ಬೌಂಡರಿ, 4ಸಿಕ್ಸರ್​) ಅವರ ಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆಸ್ಟ್ರೇಲಿಯಾ 6ನೇ ಬಾರಿಗೆ ವಿಶ್ವಕಪ್​ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ಮತ್ತೊಮ್ಮೆ ಕ್ರಿಕೆಟ್​ ಲೋಕದ ಅಧಿಪತಿ ಎಂಬುದನ್ನು ಸಾಬೀತು ಮಾಡಿದೆ.

ಭಾರತ ನೀಡಿದ 241 ರನ್​ಗಳ ಸಾಧಾರಣ ಗುರಿ ಬೆನ್ನತ್ತಿದ ಆಸಿಸ್ ಕೇವಲ​ 43 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 241 ರನ್​ ಗಳಿಸುವ ಮೂಲಕ 6 ವಿಕೆಟ್​ಗಳ ಅಂತರದಲ್ಲಿ ಸುಲಭವಾಗಿ ವಿಜಯ ಸಾಧಿಸಿತು. ಕೇವಲ 47 ರನ್​ಗಳಿಗೆ ಪ್ರಮುಖ 3 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಆಸಿಸ್​​ಗೆ ಟ್ರಾವಿಸ್​ ಹೆಡ್​ ಆಪತ್ಬಾಂಧವರಾದರು. ನಿರ್ಣಾಯಕ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ಹೆಡ್​, ಆಸಿಸ್​ಗೆ ಸುಲಭ ಗೆಲುವು ತಂದುಕೊಟ್ಟರು.

ಇನ್ನು ಭಾರತೀಯ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಹೆಡ್​, ಅಕ್ಷರಶಃ ಅಮೋಘ ಆಟವಾಡಿದರು. ಈಮೂಲಕ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉತ್ತಮ ಪ್ರದಶನ ನೀಡುವ ಮೂಲಕ ಭಾರತವನ್ನು ಬಗ್ಗು ಬಡಿದರು.

ಲಬುಶೇನ್​ ಸಾಥ್​: ಇತ್ತ ಹೆಡ್​ ಜತೆಗೆ ಮಾರ್ನಸ್​ ಲಬುಶೇನ್​ ಉತ್ತಮ ಸಾಥ್​ ನೀಡಿದರು. ಈ ಜೋಡಿ ನಿರ್ಣಾಯಕ ಪಂದ್ಯದಲ್ಲಿ 192 ರನ್​ಗಳ ಅಮೋಘ ಜತೆಯಾಟವಾಡಿದರು. ತಾಳ್ಮೆಯ ಆಟವಾಡಿದ ಲಬುಶೇನ್ 110​ ಎಸೆತಗಳಲ್ಲಿ 4 ಬೌಂಡರಿಯೊಂದಿಗೆ ಅಜೇಯ 58 ರನ್​ಗಳ ಅರ್ಧಶತಕ ಸಿಡಿಸಿ ಮಿಂಚಿದರು. ಉಳಿದಂತೆ ಗ್ಲೇನ್​ ಮ್ಯಾಕ್ಸ್​​ವೆಲ್​ 2 ರನ್​ ಗಳಿಸಿ ಅಜೇಯರಾಗಿ ಉಳಿದರು.

ಆರಂಭಿಕ ಆಘಾತ: ಆರಂಭದಲ್ಲಿ ಮೊಹಮ್ಮದ್​ ಶಮಿ ಮತ್ತು ಜಸ್​ಪ್ರೀತ್​ ಬುಮ್ರಾ ಆಸಿಸ್​ ಪಡೆಗೆ ಆಘಾತ ನೀಡಿದರು. ತಂಡದ ಮೊತ್ತ 16 ರನ್​ ಇದ್ದಾಗ 7 ರನ್​ ಗಳಿಸಿದ್ದ ಡೇವಿಡ್​ ವಾರ್ನರ್​ ಮೊಹಮ್ಮದ್​ ಶಮಿ ಓವರ್​ನಲ್ಲಿ ಕೊಹ್ಲಿಗೆ ಕ್ಯಾಚಿತ್ತು ನಿರ್ಗಮಿಸಿದರು. ಇದರ ಬೆನ್ನಲ್ಲೇ ನಾನೇನು ಕಮ್ಮಿ ಎನ್ನುವಂತೆ ಮಾರಕ ಬೌಲಿಂಗ್​ ದಾಳಿ ಮಾಡಿದ ಬುಮ್ರಾ, ಮಿಚೆಲ್​ ಮಾರ್ಷ್​ (15) ಮತ್ತು ಸ್ಟೀವ್​ ಸ್ಮಿತ್​ (4) ಅವರನ್ನು ಬಂದಷ್ಟೇ ವೇಗವಾಗಿ ಪೆವಿಲಿಯನ್​ ಅಟ್ಟಿದರು. ಕೇವಲ 43 ರನ್​ಗೆ ಪ್ರಮುಖ 3 ವಿಕೆಟ್​ ಕಳೆದುಕೊಳ್ಳುವ ಮೂಲಕ ಆಸಿಸ್​ ಪಡೆ ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಗೆಲುವು ಭಾರತದ್ದೇ ಎಂಬ ಅಭಿಪ್ರಾಯ ಮೂಡಿಬಂದಿತ್ತು. ಆದರೆ, ಅಭಿಪ್ರಾಯವನ್ನು ಹೆಡ್​ ಅಕ್ಷರಶಃ ಬದಲಾಯಿಸಿಬಿಟ್ಟರು.

ಟೀಮ್​ ಇಂಡಿಯಾ ಪರ ಜಸ್​ಪ್ರೀತ್​ ಬುಮ್ರಾ 2 ವಿಕೆಟ್ ಕಬಳಿಸಿದರೆ, ಶಮಿ ಒಂದು ವಿಕೆಟ್​ಗೆ ತೃಪ್ತಿಪಟ್ಟುಕೊಂಡರು. ಉಳಿದಂತೆ ಯಾವೊಬ್ಬ ಬೌಲರ್​ಗಳು ಕೂಡ ಆಸಿಸ್​ ಬ್ಯಾಟರ್​ಗಳಿಗೆ ಸವಾಲಾಗಲಿಲ್ಲ. ಸ್ಪಿನ್ನರ್​ಗಳಂತೂ ತಮ್ಮ ಛಾಪು ಮೂಡಿಸಲೇ ಇಲ್ಲ. ಬ್ಯಾಟಿಂಗ್​ ಮತ್ತು ಬೌಲರ್​ಗಳ ವೈಫಲ್ಯವೇ ಟೀಮ್​ ಇಂಡಿಯಾದ ಹೀನಾಯ ಸೋಲಿಗೆ ಕಾರಣ ಎಂದು ಹೇಳಬಹುದು.

ಆರನೇ ವಿಶ್ವಕಪ್​ ಗೆಲುವು: ಏಕದಿನ ವಿಶ್ವಕಪ್‌ ಇತಿಹಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದು, ಇದು ಎರಡನೇ ಬಾರಿ. 2003ರ ವಿಶ್ವಕಪ್‌ನಲ್ಲಿ ಮೊದಲ ಬಾರಿ ಮುಖಾಮುಖಿಯಾಗಿದ್ದವು. ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಸೌರವ್ ಗಂಗೂಲಿ ನಾಯಕತ್ವದ ಭಾರತವನ್ನು ಸೋಲಿಸಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ಮತ್ತೊಮ್ಮೆ ಭಾರತದ ವಿರುದ್ಧ ಗೆಲುವು ಸಾಧಿಸುವ ಮೂಲಕ ಆರನೇ ಬಾರಿ ವಿಶ್ವಕಪ್​ ಗೆಲುವು ಸಂಭ್ರಮಿಸುತ್ತಿದೆ. 1987, 1999, 2003, 2007, 2015 ಮತ್ತು ಇದೀಗ 2023 ರಲ್ಲೂ ವಿಜಯಶಾಲಿಯಾಗಿದೆ. ಈ ಮೂಲಕ ಒಟ್ಟು ಆರು ಬಾರಿ ಆಸ್ಟ್ರೇಲಿಯಾ ವಿಶ್ವಕಪ್‌ಗೆ ಮುತ್ತಿಟ್ಟಿದೆ.

ಬ್ಯಾಟಿಂಗ್​ನಲ್ಲಿ ಎಡವಿದ ಭಾರತ: ಇದಕ್ಕೂ ಮುನ್ನ ಟಾಸ್​ ಸೋತು ಬ್ಯಾಟಿಂಗ್​ ಮಾಡಿದ ಭಾರತ ನಿಗದಿತ 50 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 240 ರನ್​ ಕಲೆಹಾಕಿತು. ಈ ಮೂಲಕ ಆಸಿಸ್​ ಗೆಲುವಿಗೆ 241 ರನ್​ಗಳ ಸಾಧಾರಣ ಗುರಿ ನೀಡಿತು. ತಂಡದ ಪರ ಶುಭಮಾನ್​ ಗಿಲ್​ ಮತ್ತು ರೋಹಿತ್​ ಶರ್ಮ ಆರಂಭಿಕರಾಗಿ ಕಣಕ್ಕಿಳಿದರು. ತಂಡದ ಮೊತ್ತ 30 ಆಗಿದ್ದಾಗ 4 ರನ್​ ಗಳಿಸಿದ್ದ ಗಿಲ್​, ಕ್ಯಾಚಿತ್ತು ನಿರ್ಗಮಿಸುವ ಮೂಲಕ ಆರಂಭಿಕ ಆಘಾತ ನೀಡಿದರು. ಇತ್ತ 31 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ ನೆರವಿನೊಂದಿಗೆ 47 ರನ್​ ಗಳಿಸಿ ಸ್ಫೋಟಕ ಆಟವಾಡುತ್ತಿದ್ದ ರೋಹಿತ್​, ಅರ್ಧ ಶತಕಕ್ಕೆ ಇನ್ನೂ ಮೂರು ರನ್​ ಬಾಕಿ ಇರುವಾಗಲೇ ಮಿಚೆಲ್​ ಸ್ಟಾರ್ಕ್​ ಓವರ್​ನಲ್ಲಿ ಆ್ಯಡಂ ಜಂಪಾಗೆ ಕ್ಯಾಚಿತ್ತು ಪೆವಲಿಯನ್​ಗೆ ಮರಳಿದರು. ಇದರಿಂದ ತಂಡಕ್ಕೆ ಹಿನ್ನಡೆಯಾಯಿತು.

ವಿರಾಟ್​ ಕೊಹ್ಲಿ ತಾಳ್ಮೆಯ ಆಟದೊಂದಿಗೆ ಇನಿಂಗ್ಸ್​ ಕಟ್ಟಿದರೆ, ಸಮಿಫೈನಲ್​ನಲ್ಲಿ ಸ್ಫೋಟಕ ಶತಕದೊಂದಿಗೆ ಅಬ್ಬರಿಸಿ ಬೊಬ್ಬಿರಿದಿದ್ದ ಶ್ರೇಯಸ್​ ಅಯ್ಯರ್​ ಕೇವಲ 4 ರನ್​ಗಳಿಗೆ ಔಟಾಗಿದ್ದು, ಭಾರತಕ್ಕೆ ಭಾರೀ ಆಘಾತವಾಯಿತು. ಅಲ್ಲದೆ, ಕೇವಲ 81 ರನ್​ಗೆ ಪ್ರಮುಖ ಮೂರು ವಿಕೆಟ್​ ಕಳೆದುಕೊಂಡು ಭಾರತ ಸಂಕಷ್ಟಕ್ಕೆ ಸಿಲುಕಿತು. ಬಳಿಕ ಕೊಹ್ಲಿ ಮತ್ತು ರಾಹುಲ್​ ಜತೆಗೂಡಿ ಉತ್ತಮ ಜತೆಯಾಟದ ಮುನ್ಸೂಚನೆ ನೀಡಿದರು. ಆದರೆ, 64 ಎಸೆತಗಳಲ್ಲಿ 3 ಬೌಂಡರಿಯೊಂದಿಗೆ 54 ರನ್​ ಗಳಿಸಿ ಭರವಸೆ ಮೂಡಿಸಿದ್ದ ಕೊಹ್ಲಿ, ಔಟಾಗುವ ಮೂಲಕ ಭಾರತಕ್ಕಿದ್ದ ಬಹುದೊಡ್ಡ ಭರವಸೆ ಮಂಕಾಯಿತು. ಈ ಜೋಡಿ 68 ರನ್​ಗಳ ಜತೆಯಾಟ ನೀಡಿತ್ತು.

ಬಳಿಕ ಬಂದ ರವೀಂದ್ರ ಜಡೇಜಾ ಕೇವಲ 9 ರನ್​ಗೆ ವಿಕೆಟ್​ ಒಪ್ಪಿಸಿ, ಬಂದಷ್ಟೇ ವೇಗವಾಗಿ ಪೆವಿಲಿಯನ್​ಗೆ ಮರಳಿದರು. 107 ಎಸೆತಗಳಲ್ಲಿ ಕೇವಲ 1 ಬೌಂಡರಿಯೊಂದಿಗೆ 66 ರನ್​ಗಳಿಸಿ ತಾಳ್ಮೆಯ ಆಟಕ್ಕೆ ಮೊರೆ ಹೋಗಿದ್ದ ರಾಹುಲ್​ಗೆ ಮಿಚೆಲ್​ ಸ್ಟಾರ್ಕ್​ ಪೆವಿಲಿಯನ್​ ಹಾದಿ ತೋರಿದರು. ನೆದರ್ಲೆಂಡ್​ ವಿರುದ್ಧದ ಲೀಗ್​ ಪಂದ್ಯದಲ್ಲಿ ಕೇವಲ 64 ಎಸೆತಗಳಲ್ಲಿ 102 ರನ್​ ಗಳಿಸಿದ್ದ ರಾಹುಲ್​, ಈ ಪಂದ್ಯದಲ್ಲಿ 107 ಎಸೆತಗಳಲ್ಲಿ 66 ರನ್​ ಗಳಿಸಿದರು. ಆಸಿಸ್​ ಬೌಲರ್​ಗಳನ್ನು ಎದುರಿಸಲು ರಾಹುಲ್​ ತಡಕಾಡಿದರು.

ನಂತರ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದರು.

ನಿರ್ಣಾಯಕ ಪಂದ್ಯದಲ್ಲಿ ಆಸಿಸ್​ ಪರ ಮಾರಕ ಬೌಲಿಂಗ್​ ದಾಳಿ ಮಾಡಿದ ಮಿಚೆಲ್​ ಸ್ಟಾರ್ಕ್​ ಪ್ರಮುಖ 3 ವಿಕೆಟ್​ ಕಬಳಿಸಿ ಮಿಂಚಿದರು. ನಾಯಕ ಪ್ಯಾಟ್​ ಕ್ಯುಮಿನ್ಸ್​ ಹಾಗೂ ಜೋಶ್​ ಹಜಾಲ್​ವುಡ್​ ತಲಾ 2 ವಿಕೆಟ್​ ಪಡೆದರೆ, ಗ್ಲೇನ್​ ಮ್ಯಾಕ್ಸ್​ವೆಲ್​ ಮತ್ತು ಆ್ಯಡಂ ಜಂಪಾ ತಲಾ ಒಂದೊಂದು ವಿಕೆಟ್​ ಪಡೆದರು. ಕುಲದೀಪ್​ ಯಾದವ್​ ರನೌಟ್​ಗೆ ತುತ್ತಾದರು. ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ