NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ- ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಪ್ರವಾಸಿಗರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.

750 ಕೆ.ಜಿ.ಯ ಅಂಬಾರಿಯಲ್ಲಿ ಚಾಮುಂಡಿದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಅಭಿಮನ್ಯು ಬನ್ನಿ ಮಂಟಪದತ್ತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆದ ನಾಡಹಬ್ಬಕ್ಕೆ ತೆರೆ ಬೀದಿದೆ. ಈ ವೇಳೆ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ  ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸಿದ್ದರು.

ಈ ಮೂಲಕ ಸಾಂಸ್ಕೃತಿಕ ರಾಜಧಾನಿ ಮೈಸೂರು ಮತ್ತೊಮ್ಮೆ ರಾಜ ವೈಭೋಗಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಈ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ನಂತರ, ಅಭಿಮನ್ಯು ಮೇಲೆ ಅಂಬಾರಿಯನ್ನು ಕೂರಿಸಲಾಯಿತು. ಸಂಜೆ 4.40 ರಿಂದ 5 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಗಜರಾಜ ಅಭಿಮನ್ಯು ಹೊತ್ತುಬಂದ 750 ಕೆಜಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಸುಮಾರು 5.10ಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮೈಸೂರು ಮೇಯರ್‌, ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್‌ ಕೂಡ ಉಪಸ್ಥಿತರಿದ್ದರು.

4 ದಶಕಗಳ ಭವ್ಯ ಇತಿಹಾಸ: 1610ರಲ್ಲಿ ಆರಂಭಗೊಂಡ ದಸರಾ ಮಹೋತ್ಸವಕ್ಕೆ 4 ದಶಕಗಳ ಭವ್ಯ ಇತಿಹಾಸವಿದೆ. ಮೈಸೂರು ದಸರಾ ದೇಶದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಲ್ಲೇ ಚಿರಪರಿಚಿತ ಹಾಗೂ ಪ್ರಖ್ಯಾತಿ ಪಡೆದಿದೆ.

ಆದರೆ ಈ ಬಾರಿ ಮಳೆ ಬಾರದ ಕಾರಣಕ್ಕೆ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯದೆ ಸೊರಗಿ ಹೋಗುತ್ತಿದೆ ಎಂದೇ ಭಾವಿಸಲಾಗಿತ್ತು. ಈ ನಡುವೆ ಅದಕ್ಕೆ ಅವಕಾಶವಿಲ್ಲ ಎಂಬಂತೆ ಈ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ದಸರಾ ದಿಬ್ಬಣ ನೆರವೇರಿತು. ಸಾಲಂಕೃತ ಗಜಪಡೆಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕಿದನು.

ಬೆಳಗ್ಗೆಯಿಂದಲೂ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಪ್ರದಾಯ ಬದ್ಧ ಕಾರ್ಯಕ್ರಮಗಳು ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳ ಜತೆಗೆ ಆಗಮಿಸಿ ಮಧ್ಯಾಹ್ನ ನಂದಿ ಧ್ವಜಕ್ಕೆ ಪೂಜೆ ಮಾಡುವ ಮೂಲಕ ದಸರಾ ದಿಬ್ಬಣಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಿದ್ದಂತೆ ಕಲಾ ತಂಡಗಳ ಹಾಗೂ ಟ್ಯಾಬ್ಲೋಗಳ ಮೆರವಣಿಗೆ ಆರಂಭವಾಯಿತು. ಕೀಲುಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಹೀಗೆ ಹತ್ತು ಹಲವು ಬಗೆಯ ಕಲಾ ಪಾಂಡಿತ್ಯ ಪ್ರದರ್ಶನಗೊಂಡಿತು. ಸ್ತಬ್ಧ ಚಿತ್ರಗಳ ಯಾತ್ರೆಯಲ್ಲಂತೂ ಈ ಬಾರಿ ಸರ್ಕಾರದ ಐದು ಗ್ಯಾರಂಟಿಗಳ ಟ್ಯಾಬ್ಲೋ ವಿಶೇಷ ಸ್ಥಾನ ಪಡೆದವು. ಪೊಲೀಸ್ ಬ್ಯಾಂಡ್ ಸಹ ವೀಕ್ಷಕರಿಗೆ ಮುದ ನೀಡಿತು.

4ನೇ ಬಾರಿಗೆ ಅಂಬಾರಿ ಹೊತ್ತ ಅಭಿಮನ್ಯುಗೆ ನಿಶಾನೆ ಆನೆಯಾಗಿ ಅರ್ಜುನ, ನೌಫತ್ ಮತ್ತು ಸಾಲಾನೆಯಾಗಿ ಗೋಪಿ, ಧನಂಜಯ, ಮಹೇಂದ್ರ, ಭೀಮ,  ಪ್ರಶಾಂತ್‌ ಸಾಥ್ ನೀಡಿದರೆ, ವರಲಕ್ಷ್ಮೀ ಮತ್ತು  ವಿಜಯಾ ಎಂಬ ಹೆಣ್ಣಾನೆಗಳು ಕುಮ್ಕಿ ಆನೆಗಳ ಪಾತ್ರವಹಿಸಿದವು.

ಬರದ ನಡುವೆಯೂ ಈ ಬಾರಿ ಅರಮನೆ ಆವರಣ ದಾಟಿದ ಜಂಬೂ ಸವಾರಿ ರಾಜಪಥದಲ್ಲಿ ಸಾಗಿ ದಸರಾ ಮೆರಗು ಹೆಚ್ಚಿಸಿತು. ಲಕ್ಷಾಂತರ ಮಂದಿ ಕಣ್ತುಂಬಿಕೊಂಡು ಸಂತಸ ವ್ಯಕ್ತಪಡಿಸಿದರು. ಸುಮಾರು 25 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಬಾರಿ ನೀರಿಕ್ಷೆಗೂ ಮೀರಿ ಜನ ಸೇರಿದ್ದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ