NEWSನಮ್ಮಜಿಲ್ಲೆನಮ್ಮರಾಜ್ಯ

ಬೀಡನಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಯಡಹಳ್ಳಿ ಮಹದೇವ್‌ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿ ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್‌ ಬೆಂಬಲಿತ ಯಡಹಳ್ಳಿ ಮಹದೇವ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಕೃಷ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಹದೇವ್‌ ಆಯ್ಕೆಯಾಗಿದ್ದಾರೆ. ಒಟ್ಟು 9 ಮಂದಿ ಸದಸ್ಯರಿರುವ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಹದೇವ್‌ ನಾಮಪತ್ರ ಸಲ್ಲಿಸಿದ್ದರು. ಇನ್ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಇವರನ್ನುಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಜಿ. ಮದ್ದಾನಪ್ಪ ಕರ್ತವ್ಯ ನಿರ್ವಹಿಸಿದ್ದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಹದೇವ್‌ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿ, ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸ್ವಚ್ಛತೆ, ವಿದ್ಯುತ್‌ ಮತ್ತು ಇ ಸ್ವತ್ತುಗಳನ್ನು ಮಾಡಿಸಿಕೊಡುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಇನ್ನು ಗ್ರಾಮದಲ್ಲಿ ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ, ಕುಡಿಯುವ ನೀರು, ಪ್ರತಿಯೊಬ್ಬರಿಗೂ ವಿದ್ಯುತ್‌ ಮತ್ತು ಮನೆ ಇಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.

ಎಲ್ಲರ ಬೆಂಬಲದಿಂದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು, ನಮ್ಮ ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರೆ ಇರುವುದರಿಂದ ಅವರ ಸಹಕಾರ ಮತ್ತು ಮಾರ್ಗದರ್ಶನ ಪಡೆದು ನನ್ನ ಅಧಿಕಾರವಧಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಒಳ್ಳೆ ಕೆಲಸ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಇನ್ನು ಸರ್ಕಾರದಿಂದ ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮವನ್ನು ಅಭಿವೃದ್ಧಿ ಮಾಡುವ ಗುರಿ ಇದೆ. ನನ್ನ ಅಧಿಕಾರ ಅವಧಿಯಲ್ಲಿ ಹೊಸ ಬದಲಾವಣೆ ತರಬೇಕು, ಲಂಚ ಮುಕ್ತ ಪಂಚಾಯಿತಿಯಾಗಿಸುವ ನಿಟ್ಟಿನಲ್ಲಿ ಬಡವರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡುತ್ತೇನೆ. ಅದಕ್ಕೆ ಗ್ರಾಮಸ್ಥರ ಮತ್ತು ಸದಸ್ಯರ ಬೆಂಬಲ ಬೇಕು ಎಂದು ಹೇಳಿದರು.

ಇನ್ನು 20 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಮತಾ ಅವರು ತಮ್ಮ ಸ್ಥಾನದಲ್ಲಿ ಇನ್ನು ಹತ್ತು ತಿಂಗಳು ಮುಂದುವರಿಯಲಿದ್ದಾರೆ.

ಗ್ರಾಮದ ಮುಖಂಡ ಅಪ್ಪುಗೌಡ, ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷರಾದ  ಮಮತಾ ಸೇರಿದಂತೆ ಎಲ್ಲ ಸದಸ್ಯರು, ಗ್ರಾಪಂ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?