NEWSನಮ್ಮಜಿಲ್ಲೆಬೆಂಗಳೂರು

ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ದಕ್ಷಿಣ ವಲಯ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ಬರುವ ಯಡಿಯೂರು ಕೆರೆಯಲ್ಲಿನ ಗಣಪತಿ ವಿಸರ್ಜನಾ ಕೊಳ(ಕಲ್ಯಾಣಿ)ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು.

ಯಡಿಯೂರು ಕರೆಯ ಗಣಪತಿ ವಿಸರ್ಜನಾ ಕೊಳದಲ್ಲಿ 2023ರಲ್ಲಿ 11 ದಿನಗಳ ಅವಧಿಯಲ್ಲಿ ಅಂದಾಜು 1,75,000 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿತ್ತು. ಈ ಬಾರಿ 7ನೇ ಸೆಪ್ಟೆಂಬರ್ 2024 ರಿಂದ 17ನೇ ಸೆಪ್ಟೆಂಬರ್ 2024ರವರೆಗೆ 11 ದಿನಗಳ ಅವಧಿಯವರೆಗೆ ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮೊದಲ ಮೂರುದಿನಗಳ ಕಾಲ ಹೆಚ್ಚು ಗಣೇಶ ಮೂರ್ತಿಗಳು ವಿಸರ್ಜನೆಯಾಗಲಿದ್ದು, ವಿಸರ್ಜನಾ ಕೊಳ ಬಹುತೇಕ ಭರ್ತಿಯಾಗಲಿದೆ. ಈ ಹಿನ್ನೆಲೆಯಲ್ಲಿ 10ನೇ ಸೆಪ್ಟೆಂಬರ್ 2024 ರಂದು ಶುಚಿತ್ವ ಕಾರ್ಯದ ನಿಮಿತ್ತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಇರುವುದಿಲ್ಲ. 11 ರಿಂದ 17ನೇ ತಾರೀಖಿನವರೆಗೆ ಮಾತ್ರ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲು ಅಗತ್ಯ ಸೌಲಭ್ಯಗಳ ವ್ಯವಸ್ಥೆಗೆ ಬಿಬಿಎಂಪಿ ಕ್ರಮ ಕೈಗೊಂಡಿದೆ.

18ನೇ ಸೆಪ್ಟೆಂಬರ್ 2024 ರಿಂದ ಸದರಿ ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಇಲ್ಲ ಎಂದು ಪದ್ಮನಾಭ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.

ಪಿಓಪಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ: ಯಡಿಯೂರು ಕೆರೆಯ ಗಣಪತಿ ವಿಸರ್ಜನಾ ಕೊಳದಲ್ಲಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ವಿರ್ಜನೆ ಮಾಡಲು ಅವಕಾಶ ನೀಡಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ.

ಈ ವೇಳೆ ಪದ್ಮನಾಭ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬನಶಂಕರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಇನ್ನಿತರು ಉಪಸ್ಥಿತರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ