NEWSದೇಶ-ವಿದೇಶನಮ್ಮರಾಜ್ಯ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ಬನ್ನಿ ಮರಕ್ಕೆ ಪೂಜೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ಅತ್ಯಾಕರ್ಷಕ ಜಂಬೂ ಸವಾರಿ, 415 ನೇ ನಾಡಹಬ್ಬ ದಸರಾ ಮೆರವಣಿಗೆ ಇಂದು ವೈಭವಯುತವಾಗಿ ನಡೆಯಲಿದೆ.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮೆರವಣಿಗೆಗೆ ಕೆಲವೇ ಕೆಲವು ಗಂಟೆಗಳು ಮಾತ್ರ ಉಳಿದಿದ್ದು, 415ನೇ ನಾಡಹಬ್ಬ ದಸರಾ ಮೆರವಣಿಗೆಗೆ ಇಡೀ ಮೈಸೂರು ಸಜ್ಜಾಗಿದೆ. ವಿಶ್ವದ ದೃಷ್ಟಿ ಇಂದು ಮೈಸೂರಿನ ಮೇಲಿದೆ. ಜಂಬೂಸವಾರಿ ಕಣ್ತುಂಬಿಕೊಳ್ಳಲು ಕರುನಾಡು ಕೂಡ ಕಾತರದಿಂದ ಕಾಯುತ್ತಿದೆ.

ಐತಿಹಾಸಿಕ `ದಸರಾ’: ದಸರಾ ಮೆರವಣಿಗೆ ಆರಂಭಕ್ಕೂ ಮುನ್ನ ಮೈಸೂರು ಅರಮನೆಯಲ್ಲಿ (Mysuru Darasa) ಖಾಸಗಿ ದರ್ಬಾರ್ ಭಾಗವಾಗಿ ವಿಜಯಯಾತ್ರೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಅರಮನೆಯ ಕಲ್ಯಾಣ ಮಂಟಪದ ಮುಂಭಾಗ ಜಟ್ಟಿ ಸಮುದಾಯದವರು ಜಟ್ಟಿ ಕಾಳಗ ನಡೆಸಿ ಮಹಾರಾಜರಿಗೆ ತಮ್ಮ ನಿಷ್ಠೆ ಪ್ರದರ್ಶಿಸಲಿದ್ದಾರೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ನಡೆಸಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ 1.46ರಿಂದ 2.08ರಲ್ಲಿ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜದ ಪೂಜೆ ನೆರವೇರಲಿದೆ. ನಂತರ ನಾಡಿನ ಕಲೆ ಸಂಸ್ಕೃತಿ, ಪರಂಪರೆಯನ್ನು ಸಾರುವ ಸ್ತಬ್ಧಚಿತ್ರಗಳು, ಕಲಾತಂಡಗಳ ಅದ್ದೂರಿ ಮೆರವಣಿಗೆ ಆರಂಭವಾಗಲಿದೆ. ಸಂಜೆ 4ರಿಂದ 4.30ವರೆಗೆ ಸಲ್ಲುವ ಶುಭ ಕುಂಭ ಮುಹೂರ್ತದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಿದ್ದಾರೆ.

750 ಕೆಜಿ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡಿ ಮೂರ್ತಿಯನ್ನು ಹೊತ್ತ ಅಭಿಮನ್ಯು ಸಾಂಸ್ಕೃತಿಕ ನಗರಿಯ ರಾಜಬೀದಿಯಲ್ಲಿ ಸಾಗಲಿದೆ. ಕ್ಯಾಪ್ಟನ್ ಅಭಿಮನ್ಯುಗೆ 9ಆನೆಗಳು ಸಾಥ್ ನೀಡಲಿವೆ. ಈ ಕ್ಷಣಕ್ಕೆ 5 ಲಕ್ಷಕ್ಕೂ ಹೆಚ್ಚು ಮಂದಿ ಸಾಕ್ಷಿಯಾಗಲಿದ್ದಾರೆ.

ಲಕ್ಷಾಂತರ ಜನ ದಸರಾ ಕಣ್ತುಂಬಿಕೊಳ್ಳಲು ಮೈಸೂರಿಗೆ ಈಗಾಗಲೇ ದೇಶ ವಿದೇಶದಿಂದ ಆಗಮಿಸಿದ್ದು, ರಾಜ್ಯ ಅಂತಾರಾಜ್ಯದಿಂದ ಆಗಮಿಸುತ್ತಿದ್ದಾರೆ. ಬರುವ ಎಲ್ಲರೂ ಸುರಕ್ಷಿತವಾಗಿ ದಸರಾ ನೋಡಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ