NEWSಆರೋಗ್ಯನಮ್ಮಜಿಲ್ಲೆ

ನ್ಯಾಯಾಧೀಶರು, ವಕೀಲರಿಂದ ಯೋಗ ದಿನ ಆಚರಣೆ – ಯೋಗಗುರು ಅಲ್ಲಮಪ್ರಭು ಸಾಥ್‌

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಯೋಗಗುರು ಅಲ್ಲಮಪ್ರಭು ನೇತೃತ್ವದಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಯೋಗ ಪ್ರದರ್ಶನ ಮಾಡಿ ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು.

ಇಂದು ಮುಂಜಾನೆ ಆರರಿಂದ ಏಳು ಗಂಟೆಯವರೆಗೆ ಸಾಮೂಹಿಕ ಯೋಗ ಪ್ರದರ್ಶನ ಮಾಡಿದ ವಕೀಲರು ಮತ್ತು ನ್ಯಾಯಾಧೀಶರು ಯೋಗ ಮಾರ್ಗದರ್ಶನ ನೀಡಿದ ಅಂತಾರಾಷ್ಟ್ರೀಯ ಯೋಗ ಪಟು ಅಲ್ಲಮಪ್ರಭು ಅವರನ್ನು ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಗೌರವಿಸಿ ಅಭಿನಂದಿಸಿದರು.

ಆರೋಗ್ಯವಂತ ಜೀವನಕ್ಕೆ ಯೋಗವು ಸಂಜೀವಿನಿಯಾಗಿದೆ ಆದ್ದರಿಂದ ಯುವ ಜನರು ವ್ಯರ್ಥವಾಗಿ ಕಾಲಹರಣ ಮಾಡದೇ ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡು ಯೋಗದಿಂದ ಸದೃಢ ಆರೋಗ್ಯವನ್ನು ರೂಢಿಸಿಕೊಳ್ಳಬೇಕು ಎಂದು ನ್ಯಾಯಾಧಿಶರಾದ ಶಕುಂತಲಾ ಮನವಿ ಮಾಡಿದರು.

ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ, ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಹಿರಿಯರ ನಾಣ್ನುಡಿಯಂತೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಸದೃಢ ಆರೋಗ್ಯವಂತ ಜೀವನ ನಡೆಸಬಹುದು ಎಂಬ ಸತ್ಯವನ್ನು ಅರಿತು ಪ್ರತಿದಿನವೂ ಯೋಗ ಮಾಡಿ ರೋಗ ರುಜಿನಗಳಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ವಕೀಲರ ಸಂಘದ ಕಾರ್ಯದರ್ಶಿ ಆರ್.ಕೆ. ರಾಜೇಗೌಡ ಮಾತನಾಡಿ, ವಿಶ್ವಕ್ಕೆ ಯೋಗ ಮತ್ತು ಆಯುರ್ವೇದದ ಮಹತ್ವವನ್ನು ಸಾರಿದ ಭಾರತ ದೇಶವು ವಿಶ್ವದ ಪ್ರಮುಖ ಯೋಗ ರಾಷ್ಟ್ರವಾಗಿ ಹೊರಹೊಮ್ಮುವ ಮೂಲಕ ಇತಿಹಾಸ ನಿರ್ಮಿಸಿದೆ. ರೋಗಗಳಿಂದ ಮುಕ್ತವಾಗಿ ಸದೃಢವಾದ ಆರೋಗ್ಯವಂತ ಜೀವನ ನಡೆಸಲು ಯೋಗವು ದಾರಿ ಮಾರ್ಗ ವಾಗಿರುವುದರಿಂದ ಪ್ರತಿದಿನವೂ ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಿ ಸ್ವಾಭಿಮಾನಿ ಬದುಕು ನಡೆಸಬೇಕು ಎಂದು ಹೇಳಿದರು.

ವಕೀಲರ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್ ಯೋಗದ ಮಹತ್ವ ಸಾರುವ ಸ್ವರಚಿತ ಕವನ ವಾಚನ ಮಾಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಬಂಡಿಹೊಳೆ ಗಣೇಶ್, ಎಂ. ಆರ್.ಪ್ರಸನ್ನಕುಮಾರ್ ಮಾತನಾಡಿದರು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ