NEWSನಮ್ಮಜಿಲ್ಲೆಶಿಕ್ಷಣ-

ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ : ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು.

ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ ಎಂದು ತನ್ನ ಬಾಲ್ಯವನ್ನು ಮೆಲುಕು ಹಾಕಿದ್ದಾರೆ.

ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ