NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್ಕಾರಕ್ಕೆ ಇಪಿಎಸ್‌ ನಿವೃತ್ತರ ಎಚ್ಚರಿಕೆ

ನಮ್ಮ ಇಳಿವಯಸ್ಸಿನಲ್ಲಿ ಇಂದಿಗೂ ನ್ಯಾಯ ಸಿಗಲಿಲ್ಲವಲ್ಲ ಎಂಬ ಮಾನಸಿಕ ಚಿಂತನೆಯಲ್ಲಿ ಈ ಹಿರಿಯ ಜೀವಗಳು ಕುಗ್ಗಿ ಹೋಗಿವೆ. ನಿವೃತ್ತರಾದ ನಾವು ಜೀವನ ನಿರ್ವಹಣೆಗಾಗಿ, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ನಡೆಸುತ್ತಿರುವ ಈ ಹೋರಾಟವನ್ನು ಕೇಂದ್ರ ಸರ್ಕಾರ ಭಾರಿ ಕೀಳಾಗಿ ಕಾಣುತ್ತಿರುವುದು ತರವಲ್ಲ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ನಿವೃತ್ತರು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ನಿಧಿ ಅಪ್ಕೆ ನಿಕಟ್” ಕಾರ್ಯಕ್ರಮ ದಂದು, ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 40ನೇ ಬೃಹತ್ ಪ್ರತಿಭಟನಾ ಸಭೆ ಜರುಗಿತು.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಏ.27ರಂದು ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಸಾರಿಗೆ ಸಂಸ್ಥೆಯ ನಿವೃತ್ತರು 38 ಡಿಗ್ರಿ ತಾಪಮಾನದಲ್ಲೂ ಪಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಯಾವುದೇ ಸ್ಥಾನಮಾನಕ್ಕೆ ಅಪೇಕ್ಷೆ ಪಟ್ಟಲ್ಲ, ತಮ್ಮ ಬದುಕಿನ ಬಂಡಿ ಸಾಗಿಸಲು ನ್ಯಾಯಯುತವಾಗಿ ಬರಬೇಕಿರುವ ಪಿಂಚಣಿ ಪಡೆಯುವುದಕ್ಕಾಗಿ.

ಆದರೆ, ನಮ್ಮ ಇಳಿವಯಸ್ಸಿನಲ್ಲಿ ಇಂದಿಗೂ ನ್ಯಾಯ ಸಿಗಲಿಲ್ಲವಲ್ಲ ಎಂಬ ಮಾನಸಿಕ ಚಿಂತನೆಯಲ್ಲಿ ಈ ಹಿರಿಯ ಜೀವಗಳು ಕುಗ್ಗಿ ಹೋಗಿವೆ. ನಿವೃತ್ತರಾದ ನಾವು ಜೀವನ ನಿರ್ವಹಣೆಗಾಗಿ, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ನಡೆಸುತ್ತಿರುವ ಈ ಹೋರಾಟವನ್ನು ಕೇಂದ್ರ ಸರ್ಕಾರ ಭಾರಿ ಕೀಳಾಗಿ ಕಾಣುತ್ತಿರುವುದು ತರವಲ್ಲ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ನಿವೃತ್ತರು.

ನಾವು ಕೇಳುತ್ತಿರುವುದಾದರೂ ಏನು ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಮತ್ತು ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ನೀಡಿ ಎಂದು, ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಅನುಷ್ಠಾನಗೊಳಿಸಿ ಎಂದು, ಹೀಗೆ ನಾವು ಪಿಎಫ್ ಕಚೇರಿ ಆವರಣದಲ್ಲಿ 40ಕ್ಕೂ ಹೆಚ್ಚು ಬಾರಿ ಹರತಾಳ ನಡೆಸಿ, ಧಿಕ್ಕಾರದ ಘೋಷಣೆ ಕೂಗುತ್ತಿದ್ದರೂ ಆ ಕೂಗು ಮುಗಿಲು ಮುಟ್ಟುತ್ತಿದ್ದರೂ ಈ ಸರ್ಕಾರ ನಡೆಸುತ್ತಿರುವವರ ದಪ್ಪ ಚರ್ಮದ ಮನುಷ್ಯರಿಗೆ ಅರ್ಥವಾಗುತ್ತಿಲ್ಲ ಎಂದರೆ ಇವರು ನಾಲಾಯಕ್‌ಗಳಲ್ಲದೆ ಮತ್ತೇನು ಎಂದು ಕಿಡಿಕಾರಿದ್ದಾರೆ.

ನಾವು 40 ಕ್ಕೂ ಹೆಚ್ಚುಬಾರಿ ಮನವಿ ಪತ್ರವನ್ನು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಕೆಲಸಕ್ಕೆ ಬಾರದಂತಿರುವ ಕೇಂದ್ರ ರಾಜ್ಯ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಪತ್ರ ಸಲ್ಲಿಸಿದರೂ ಇವರೂ ಕೂಡ ತಮ್ಮ ಸ್ಥಾನಕ್ಕೆ ತಕ್ಕುದಾದ ರೀತಿಯಲ್ಲಿ ನಡೆದುಕೊಳ್ಳದೆ ನಮ್ಮನ್ನು ಕಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಪಿಎಸ್-95 ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನಿವೃತ್ತರ ಸಂಫ, ಚಿಕ್ಕಬಳ್ಳಾಪುರ ಕೆಎಸ್ಆರ್ ಟಿಸಿ ಟ್ರಸ್ಟ್ ಪದಾಧಿಕಾರಿಗಳು ನಗರದ ಪಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಪಿಂಚಣಿ ಹೆಚ್ಚಳದ ಬಗ್ಗೆ ನಮ್ಮ 40ನೇ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸಿದರು.

ಇನ್ನು ಈಗಲಾದರೂ ನಾವು ಕೊಡುತ್ತಿರುವ ಮನವಿಗೆ ಕೂಡಲೇ ಕೇಂದ್ರ ಸಚಿವರು ಸ್ಪಂದಿಸಿ ಬೇಡಿಕೆ ಈಡೇರಿಸಬೇಕು ಎಂದು ಅಧಿಕಾರಿಗಳ ಮೂಲಕ ಆಗ್ರಹಿಸಿದ್ದಾರೆ. ಅಲ್ಲದೆ ಈ ಸರ್ಕಾರ ಇನ್ನೆಷ್ಟುದಿನ ನಮ್ಮನ್ನು ಕಾಡುತ್ತದೆಯೋ ನೋಡೋಣ ನಾವು ಕೂಡ ಹಗಲು ಸೂರ್ಯನಿಗೂ ಮತ್ತು ರಾತ್ರಿ ಚಂದ್ರನಿಗೂ ಎಲ್ಲರಿಗೂ ತಮ್ಮ ತಮ್ಮ ಕಾಲ ಬರುತ್ತದೆ ಎಂಬಂತೆ ಆ ಸಮಯಕ್ಕಾಗಿ ಕಾಯುತ್ತೇವೆ ಎಂದು ಹಠಹಿಡಿದು ಹೋರಾಟ ಮುಂದುವರಿಸುತ್ತಿದ್ದಾರೆ.

ಪ್ರತಿಪಟನಾಕಾರರು ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳನ್ನು ತೀವ್ರ ತಾರಾಟೆಗೆ ತೆಗೆದುಕೊಂಡರು. ಇದುವರೆಗೂ ನಾವು ಪ್ರತಿಭಟನೆ ಮೂಲಕ 39 ಮನವಿ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಯಾವುದೇ ಮನವಿ ಪತ್ರಕ್ಕೂ ಕೂಡ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ. ಕೇಂದ್ರ ಸರ್ಕಾರದ ಪಾರ್ಲಿಮೆಂಟರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜು ಬೊಮ್ಮಾಯಿ ನೇತೃತ್ವದ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಇಪಿಎಸ್ ನಿವೃತ್ತರ ಕನಿಷ್ಠ ಪಿಂಚಣಿ 7,500 ರೂ. ನೀಡಬೇಕು ಎಂದು ಹೇಳಿದ್ದಾರೆ.

ಇದರ ಜತೆಗೆ ಭಾರತೀಯ ಮಾಜ್ದುರ್ ಸಂಘದ ಮುಖಂಡರು ಇತ್ತೀಚೆಗೆ ಈ ಕೆಲಸಕ್ಕೆ ಬಾರದ ಕೇಂದ್ರ ಸಚಿವರಿಗೆ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಕನಿಷ್ಠ ಪಿಂಚಣಿ ನೀಡಬೇಕೆಂದು ಆಗ್ರಹಿಸಿ, ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕು. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ, ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮದುರೈ ಉಚ್ಚ ನ್ಯಾಯಾಲಯವು ದಿನಾಂಕ 02/09/2025 ರಂದು, ಕೊಲ್ಕತ್ತಾ ಉಚ್ಚ ನ್ಯಾಯಾಲಯವು 14/11/2025 ರಂದು, ಇಪಿಎಸ್ ನಿವೃತ್ತರ ಪರ ನೀಡಿರುವ ಆದೇಶ ನಮಗೂ ಅನ್ವಯವಾಗಲಿದ್ದು, ಈ ಆದೇಶವನ್ನು ಕೂಡಲೇ ಅನುಷ್ಠಾನಗೊಳಿಸಿ, ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು.

ಜೇಮ್ ಷೇಡ್ಪುರದಲ್ಲಿರುವ M/s ಟಾಟಾ ಸ್ಟೀಲ್ ಪ್ರವೇಟ್ ಲಿಮಿಟೆಡ್ ಕಂಪನಿಯ ಇಪಿಎಸ್ ನಿವೃತ್ತರಿಗೆ ಅದರ ಟ್ರಸ್ಟ್ ರೂಲ್ಸ್ ಅನ್ವಯ ಅಧಿಕ ಪಿಂಚಣಿ ನೀಡಲು ಜಂಮ್ ಷೇಡ್ ಪುರ ಇಪಿಎಫ್ಓ ಅಧಿಕಾರಿಗಳು ಸುತ್ತೋಲೆ ದಿನಾಂಕ 11/09/2025 ರಂದು ಹೊರಡಿಸಿದ್ದು, ಈ ನಿಯಮವನ್ನು ನಮ್ಮ ನಾಲ್ಕೂ ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೂ ಸಹಾ ವಿಸ್ತರಿಸಬೇಕು.

10/10/ 2025 ರಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಇಪಿಎಸ್ ನಿವೃತ್ತರ ಪರ ಉಲ್ಲೇಖಿಸಿರುವ ಪತ್ರಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಂಡು ಎಲ್ಲ ಜಂಟಿ ಆಯ್ಕೆ ಪತ್ರಗಳನ್ನು ಟ್ರಸ್ಟ್ ನಿಯಮಾವಳಿಗನ್ವಯ ಪುನರ್ ಸ್ಥಾಪಿಸಿ, ಎಲ್ಲ ಇಪಿಎಸ್ ನಿವೃತ್ತರಿಗೆ ಅಧಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಖಜಾಂಚಿ ಡೋಲಪ್ಪನವರು ಎಲ್ಲ ಹೋರಾಟಗಾರರನ್ನು ಸ್ವಾಗತಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತರಾದ ಚಂದ್ರೇಗೌಡರು, ಸಭೆಯನ್ನುದ್ದೇಷಿಸಿ ಮಾತನಾಡಿದರು.

ಅಂತಿಮವಾಗಿ ಇಪಿಎಫ್ಒ ಅಧಿಕಾರಿಗಳು ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ, ಇಂದಿನ ಪ್ರತಿಭಟನೆಯ ಸಂಪೂರ್ಣ ವಿವರಗಳನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೂ ಕಳಿಸಿ ಕೊಡುವುದಾಗಿ ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಶಂಕರ್ ಕುಮಾರ್, ಆರ್.ರಂಗನಾಥ್, ಮನೂಹರ್ ಆರ್, ನಾಗರಾಜ, ರುಕ್ಮೇಶ್ ಹಾಗೂ ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಟ್ರಸ್ಟ್ ಪದಾಧಿಕಾರಿಗಳಾದ ರಮೇಶ್, ನಾರಾಯಣಸ್ವಾಮಿ ಪ್ರತಿಭಟನಾ ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು.

Megha
the authorMegha

Leave a Reply

error: Content is protected !!
Latest news
KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ...