CRIMENEWSನಮ್ಮಜಿಲ್ಲೆಬೆಂಗಳೂರು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕ ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಗೆ ತನ್ನ ಖಾಸಗಿ (ಗುಪ್ತಾಂಗ) ಭಾಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನನ್ನು ಶಿವಾಜಿ ನಗರ ಪೊಲೀಸರು ಬಂಧಿಸಿ ಕಂಬಿಹಿಂದೆ ಬಿಟ್ಟಿದ್ದಾರೆ.

ಕಾರ್ತಿಕ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಊಟ ಮುಗಿಸಿ ಮಹಿಳೆ ಎರಡನೇ ಮಹಡಿಗೆ ಮಲಗಲು ಹೋಗುತ್ತಿದ್ದಳು. ಆ ಸಮಯದಲ್ಲಿ, ಎದುರಿನ ಮನೆಯಲ್ಲಿದ್ದ ಆರೋಪಿ ತನ್ನ ಪ್ಯಾಂಟ್ ಗುಂಡಿಗಳನ್ನು ಬಿಚ್ಚಿ ತನ್ನ ಖಾಸಗಿ ಭಾಗಗಳನ್ನು ತೋರಿಸಿದ್ದಾನೆ.

ಈ ವೇಳೆ ಮಹಿಳೆ ಅವನನ್ನು ಪ್ರಶ್ನಿಸಿದಾಗ, ಗಲಾಟೆ ಮಾಡಿದ್ದಾನೆ ಅಲ್ಲದೆ ಆತ ತನ್ನ ಗಂಡನ ಮೇಲೂ ಹಲ್ಲೆ ಮಾಡಿದ್ದಾನೆ. ಜತೆಗೆ ಈ ವೇಳೆ ಜಗಳ ಬಿಡಿಸಲು ಬಂದವರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಇನ್ನು ಈ ಘಟನೆ ಏಪ್ರಿಲ್ 13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ನಡೆದಿದೆ.

ಎರಡನೇ ಮಹಡಿಯಿಂದ ಒಂದು ಹಾಲೋ ಬ್ಲಾಕ್ ಮತ್ತು ಹೂವಿನ ಕುಂಡವನ್ನು ನೆಲ ಮಹಡಿಯಲ್ಲಿರುವವರ ಮೇಲೆ ಎಸೆದಿದ್ದಾನೆ. ಈ ವೇಳೆ ಬುದ್ಧಿ ಹೇಳಲು ಹೋದವರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಏಳು ಜನರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸದ್ಯ ಈಗ ಶಿವಾಜಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ವಿಚಾರಣೆ ವೇಳೆ ಆತ ನಾನು ಮೂತ್ರ ವಿಸರ್ಜನೆ ಮಾಡುತ್ತಿದ್ದೆ ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಆಗ ಗಲಾಟೆ ನಡೆದಿದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

Deva
the authorDeva

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ