NEWSನಮ್ಮಜಿಲ್ಲೆ

ಯುವಶಕ್ತಿ ದೇಶದ ಪ್ರಗತಿಯ ಸಂಕೇತ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಭಾರತ ದೇಶದ ಪ್ರತಿಯೊಬ್ಬ ಯುವಕನು ದೇಶಕ್ಕೋಸ್ಕರ ಸಮರ್ಪಣಾ ಭಾವ ಮತ್ತು ಪರಿಶ್ರಮದಿಂದ ದುಡಿದರೆ ಮಾತ್ರ ದೇಶದ ಪ್ರಗತಿಯು ಸಾಧ್ಯವಾಗುವುದು. ಆದ್ದರಿಂದ ಯುವಶಕ್ತಿಯೇ ದೇಶದ ಪ್ರಗತಿಯ ಸಂಕೇತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಹೇಳಿದರು.

ಹರ್ ಘರ್ ತಿರಂಗಾ ಅಭಿಯಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಹರ್ ಘರ್ ತಿರಂಗಾ ಜಾಗೃತಿ ಜಾಥಾವನ್ನು ತ್ರಿವರ್ಣ ಧ್ವಜ ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರದ ತ್ರಿವರ್ಣ ಧ್ವಜದಲ್ಲಿನ ಕೇಸರಿ ಬಣ್ಣವು ಧೈರ್ಯದ ಸಂಕೇತವಾಗಿದ್ದು, ದೇಶದ ಯುವ ಜನರ ಶಕ್ತಿಯನ್ನು ತೋರಿಸುತ್ತದೆ. ಬಳಿ ಬಣ್ಣವು ಅಹಿಂಸೆ, ಶಾಂತಿ ಮತ್ತು ಸತ್ಯದ ಸಂಕೇತವಾಗಿದೆ ಹಾಗೂ ಹಸಿರು ಬಣ್ಣವು ಫಲವತ್ತತೆಯನ್ನು, ನಿರಂತರವಾಗಿ ಹರಿಯುವ ಎಲ್ಲ ನದಿಗಳ ಶಕ್ತಿಯನ್ನು ತೋರಿಸುತ್ತದೆ.

ಅಶೋಕ ಚಕ್ರ ನ್ಯಾಯ ಶಾಸನದ ಚಿಹ್ನೆಯಾಗಿದೆ. ಸತ್ಯ, ಧರ್ಮ, ಸಾಮಾಜಿಕ ನ್ಯಾಯ, ನಿರಂತರ ಸಹೋದರತ್ವ, ಪ್ರಗತಿ, ಶಾಂತಿ, ಸಮಾನತೆಯನ್ನು ಉಳಿಸಿ ಬೆಳಸುವುದಕ್ಕೆ ಗಳಿಸಿದ ಸ್ವಾತಂತ್ರ್ಯವು ಅನೇಕ ವೀರ ಸೇನಾನಿಗಳ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ಲಭಿಸಿರುವಂತದ್ದಾಗಿದೆ.

ಇಂತಹ ಮಹಾನ್ ನಾಯಕರಿಗೆ, ರಾಷ್ಟ್ರಕ್ಕೆ ಗೌರವ ಸಮರ್ಪಣೆಯನ್ನು ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸಲ್ಲಿಸಲು ಮಾನ್ಯ ಪ್ರಧಾನಮಂತ್ರಿಯವರು ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನವು ಚಳುವಳಿಯಾಗಿ ಮಾರ್ಪಟ್ಟಿದೆ. ಇದರ ಅಂಗವಾಗಿ ದೇವನಹಳ್ಳಿ ಪಟ್ಟಣದಲ್ಲಿ ಬೃಹತ್ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡು ಸುಮಾರು ಒಂದು ಕಿಲೋಮೀಟರ್ ಉದ್ದದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಗಿದೆ.

ಇಂತಹ ಅಭಿಯಾನಗಳ ಮೂಲಕ ರಾಷ್ಟ್ರಪ್ರೇಮ, ರಾಷ್ಟ್ರಾಭಿಮಾನವನ್ನು ಹೆಚ್ಚೆಚ್ಚು ಬೆಳೆಸಿಕೊಂಡು ನಾವೆಲ್ಲರೂ ರಾಷ್ಟ್ರದ ಪ್ರಗತಿಯನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಸ್ವಾತಂತ್ರ್ಯದ ಜೊತೆಗೆ ಜವಬ್ದಾರಿಯನ್ನು ಅರಿತುಕೊಂಡು ಭಾವೈಕ್ಯತೆಯನ್ನು ಸಾರಬೇಕು ಎಂದರು.

ಇಂದು ವಿಶ್ವ ಅಂಗಾಂಗ ದಾನಿಗಳ ದಿನವಾಗಿದ್ದು, ಮರಣ ಹೊಂದಿದ ಮೇಲೆ ಸುಡುವ ಅಥವಾ ಉಳುವ ಯಾವುದೇ ಸಾಂಪ್ರದಾಯಿಕ ನಂಬಿಕೆಗಳನ್ನು ಬದಿಗಿಟ್ಟು ಪ್ರತಿಯೊಬ್ಬರೂ ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆ ಮಾಡಬೇಕು. ಒಬ್ಬ ಅಂಗಾಂಗ ದಾನಿಯಿಂದ ಎಂಟು ಜೀವಗಳಿಗೆ ಪ್ರಾಣ ಕೊಡಬಹುದಾಗಿದೆ.

ಈ ಅಮೂಲ್ಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಾರ್ಥಕತೆ ಮೆರೆಯಿರಿ ಎಂದರಲ್ಲದೇ ಪ್ರತಿಯೊಬ್ಬರು ದೇಶಾಭಿಮಾನದಿಂದ ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟು ಪ್ರತಿಯೊಬ್ಬರ ಮನೆ, ಕಚೇರಿ ಅಂಗಡಿ ಮುಗ್ಗಟ್ಟುಗಳ ಮೇಲೆ ನಮ್ಮ ರಾಷ್ಟ್ರ ತ್ರಿವರ್ಣ ಧ್ವಜವನ್ನು ಹಾರಿಸಿ ಎಂದು ಕರೆ ಕೊಟ್ಟರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ರವರ ನೇತೃತ್ವದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆ ತಿರಂಗ ಅಭಿಯಾನದ ಪ್ರಯುಕ್ತ ದೇವನಹಳ್ಳಿ ತಾಲೂಕು ಕಚೇರಿಯಿಂದ ದೇವನಹಳ್ಳಿ ಬಸ್ ನಿಲ್ದಾಣದ, ವಿಜಯಪುರ ರಸ್ತೆಯ ಮೂಲಕ ದೇವನಹಳ್ಳಿಯ ಕ್ರೀಡಾಂಗಣದವರೆಗೆ ತ್ರಿವರ್ಣ ನಡಿಗೆ(ವಾಕಥಾನ್) ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸುಮಾರು ಒಂದು ಕಿಲೋಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಹಿಡಿದು ಸಾಗಿದ್ದು ಎಲ್ಲರ ಗಮನ ಸೆಳೆದು ಆಕರ್ಷಿಸಿತು. ಸಾವಿರಾರು ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸರ್ಕಾರೇತರ ಸಂಘಟನೆಗಳ ಪದಾಧಿಕಾರಿಗಳು, ಸೇರಿದಂತೆ ಸಾರ್ವಜನಿಕರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು “ಭೋಲೋ ಭಾರತ್ ಮಾತಾಕಿ, ವಂದೇ ಮಾತರಂ” ಘೋಷಣೆಗಳೊಂದಿಗೆ ಜೈಕಾರ ಕೂಗುತ್ತಾ ಮೆರವಣಿಗೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಒಟ್ಟಾರೆ ದೇವನಹಳ್ಳಿಯ ಪಟ್ಟಣದ ಪ್ರಮುಖ ರಸ್ತೆಗಳು ತ್ರಿವರ್ಣಮಯವಾಗಿದ್ದವು.

ಜಾಥಾ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಶಾಲಾ ಕಾಲೇಜುಗಳ ಪ್ರಾಂಶುಪಾಲರುಗಳು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...