ಮೈಸೂರು: ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಅ.6ರಿಂದ ಯುವ ಸಂಭ್ರಮ ನಡೆಯಲಿದೆ.
ಚಂದನವದ ತಾರಾ ದಂಪತಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಚಿವರಾದ ಕೆ.ವೆಂಕಟೇಶ್, ಶಿವರಾಜ ಸಂಗಪ್ಪ ತಂಗಡಗಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ದೇಶಭಕ್ತಿ, ಪರಿಸರ ಪ್ರೇಮ, ಭಾವೈಕ್ಯತೆ, ಸಂವಿಧಾನದ ಆಶಯಗಳ ಕುರಿತಾದ ನೃತ್ಯರೂಪಕಗಳನ್ನು ಪ್ರದರ್ಶಿಸುವ ಮೂಲಕ ರಂಜಿಸಲಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)