VIJAYAPATHA.IN > ವಿಜಯಪಥ > NEWS > Crime > ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಉದ್ಯೋಗಿ ಅನುಮಾನಸ್ಪದ ಸಾವು
ಮೈಸೂರು: ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಉದ್ಯೋಗಿ ಹಾಸ್ಟೆಲ್‌ನ ರೂಮ್‌ನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಐಶ್(AIISH)ನಲ್ಲಿ ಟೆಕ್ನಿಷಿಯನ್ ಆಗಿದ್ದ ಪ್ರಾಣೇಶ್ (26) ಎಂಬುವವರೇ ಮೃತರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಮೂಲದ ಪ್ರಾಣೇಶ್ ವಿಶೇಷಚೇತನರಾಗಿದ್ದರು. ಇವರು ವಿಜಯಶ್ರೀಪುರದ ವೆಂಕಟೇಶ್ವರ ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿದ್ದರು.
ರೂಮ್‌ನಲ್ಲಿ ಒಬ್ಬರೇ ಇದ್ದ ಅವರು ಅಲ್ಲಿಯೇ ಮೃತಪಟ್ಟಿದ್ದಾರೆ. ಸಾಕಷ್ಟು ಸಮಯ ಕಳೆದರೂ ಹೊರಗೆ ಬಾರದಿರುವುದನ್ನು ಗಮನಿಸಿದ ಹಾಸ್ಟೆಲ್‌ನ ಇತರೇ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಸ್ಥಳ ಧಾವಿಸಿದರು.
ಸದ್ಯಕ್ಕೆ ಸಾವಿಗೆ ಕಾರಣ ಏನೆಂದು ಇನ್ನು ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
admin.savhn