CrimeNEWSಮೈಸೂರು

‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸಿಗದಾಳು ಗ್ರಾಮದ ಸಂಪತ್ ಕನ್ನಡದ ಹಲವು ಸಿನಿಮಾ ಮತ್ತು ಸೀರಿಯಲ್‌ಗಳಲ್ಲಿ ನಟಿಸಿದ್ದರು.

ಶನಿವಾರ ರಾತ್ರಿ ನೆಲಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು.

ಇತ್ತೀಚಿಗೆ `ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾದಲ್ಲಿ ಸಂಪತ್ ಗಮನ ಸೆಳೆದಿದ್ದರು. ಆದರೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ನಟ ಸಂಪತ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಇದೀಗ ಇಹಲೋಕ ತ್ಯಜಿಸಿರುವುದು ಚಿತ್ರರಂಗದ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು