NEWSಕೃಷಿನಮ್ಮಜಿಲ್ಲೆ

ಅನ್ನದಾತರಿಗೆ ಬೇಕಾದ ಬಿತ್ತನೆ ಬೀಜ  ರೆಡಿ

ಕೃಷಿ ಚಟುವಟಿಗಳ ಪ್ರಗತಿ ಪರಿಶೀಲನಾ ಸಭೆ l ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ:  ಜಿಲ್ಲೆಗೆ ಬೇಕಾದ ಎಲ್ಲ ಬೀಜ, ಗೊಬ್ಬರ ವ್ಯವಸ್ಥೆ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ರೈತರು – ಅಧಿಕಾರಿಗಳಿಂದ ಮಾಹಿತಿ ಪಡೆದರು. ಜೂನ್ ನಂತರ ಪ್ರಾರಂಭವಾಗಲಿರುವ ಕೃಷಿ ಚಟುವಟಿಕೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿತ್ತನೆಬೀಜ – ರಸಗೊಬ್ಬರ – ಕೀಟನಾಶಕ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಖರೀದಿಗೆ ಕೇಂದ್ರಗಳನ್ನು ಕೂಡಲೇ ತೆರೆಯಬೇಕು. ಇಲ್ಲದಿದ್ದರೆ ಬೆಳೆಗಾರರಿಗೆ ನಷ್ಟವುಂಟಾಗುತ್ತದೆ. ಸಾರಿಗೆ ಸಮಸ್ಯೆಯೂ ಉಂಟಾಗುತ್ತದೆ.ಆದ್ದರಿಂದ ಖರೀದಿ ಕೇಂದ್ರ ತೆರೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು . ಅದಕ್ಕೆ ವ್ಯಾಪಕ ಪ್ರಚಾರವೂ ಅಗತ್ಯವಿದ್ದು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ನೆರವು ಪಡೆಯುವಂತೆ ಸಲಹೆ ನೀಡಿದರು.

ದ್ರಾಕ್ಷಿ ಬೆಳೆಗಾರರು ಗಮನ ಸೆಳೆದ ವಿಷಯ

ದ್ರಾಕ್ಷಿ ಆನ್ ಲೈನ್ ವ್ಯಾಪಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ತೊಡಕುಗಳಿದ್ದರೂ ನಿವಾರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆ ಉತ್ತಮವಾಗಿ ಬಂದಿದೆ.ಆದರೆ ಕಿಡಿಗೇಡಿಗಳು ಕಲ್ಲಂಗಡಿ ತಿಂದರೆ ರೋಗ ಬರುತ್ತದೆ ಎಂದು ವದಂತಿ ಹಬ್ಬಿಸಿದ್ದಾರೆ. ಇದು ಸುಳ್ಳು. ಹೀಗೆ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಲ್ಲಂಗಡಿ, ಸೌತೆಕಾಯಿ ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಬಗ್ಗೆ ವೈದ್ಯರು ಹೇಳಿಕೆ ನೀಡಿದ್ದಾರೆ. ಅವರಿಂದ ಮಾಹಿತಿಗಳನ್ನು ಪಡೆಯಲಾಗಿದೆ. ಆದ್ದರಿಂದ ಭೀತಿಯಿಲ್ಲದೇ ಈ ಹಣ್ಣುಗಳ ಸೇವನೆ ಮಾಡುವಂತೆ ಸಲಹೆ ನೀಡಿದರು.

ಕಲ್ಲಂಗಡಿ ತಿಂದರೆ ಕೊರೊನಾ ಬರುತ್ತೆ ಅಂತ ಅಪಪ್ರಚಾರ ಮಾಡಲಾಗಿದೆ. ಹಾಗಾಗಿ ಕಲ್ಲಂಗಡಿಮಾರಾಟ ಆಗುತ್ತಿಲ್ಲ ಎಂದು ದೂರುಗಳು ಬಂದಿವೆ. ಒಂದು ಮೂಲದ ಪ್ರಕಾರ ಕಲ್ಲಂಗಡಿ ಹಾಗೂ ಸೌತೆಕಾಯಿ ತಿಂದರೆ  ಮನುಷ್ಯನ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹೀಗಾಗಿ ಯಾರೂ ಭಯಪಡಬಾರದು. ರೈತರಿಗೆ ಯಾರೇ ಅಧಿಕಾರಿಗಳು ತೊಂದರೆ ಮಾಡಿದಲ್ಲಿ ಅಂಥವರ ಮೇಲೆ ಹಿಂದುಮುಂದು ನೋಡದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಪ್ ಕಾಮ್ಸ್‌ನಲ್ಲಿ ತರಕಾರಿ ಹಣ್ಣು ಮೊಟ್ಟೆ ಮಾರಾಟಕ್ಕೆ ಸೂಚಿಸಲಾಗಿದೆ. ರೈತರೆಲ್ಲ ಹೆದರಬಾರದು, ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸ ರೈತರು ಮಾಡಬೇಡಿ ಎಂದು ಮನವಿ ಮಾಡಿದರು.

ಯಾರಾದರೂ ಪರಿಸ್ಥಿತಿಯ ದುರ್ಲಾಭಪಡೆದುಕೊಳ್ಳುವುದಾಗಲೀ ಪಡೆದುಕೊಂಡಿದ್ದಾಗಲಿ ತಮ್ಮಗಮನಕ್ಕೆ ಬಂದಿದ್ದೇ ಆದಲ್ಲಿ ಅವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮಜರುಗಿಸಬೇಕಾಗುತ್ತದೆ ಎಂದು ಕೃಷಿ ಸಚಿವರು ಖಡಕ್ ಎಚ್ಚರಿಕೆ ನೀಡಿದರು.

ರಾಜ್ಯದ ಸಹಕಾರ ಸಚಿವರು 1200 ಕೋಟಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಕೃಷಿಗೆ ಸಂಬಂಧಿಸಿದ ಸೊಸೈಟಿಗಳ ಚಟುವಟಿಕೆಗೆ ಯಾವುದೇ ತೊಂದರೆಯೂ ಇಲ್ಲ ಎಂದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಮುಂಭಾಗ ರೈತರಿಂದ ನೇರವಾಗಿ ಗ್ರಾಹಕರ ಮನೆಬಾಗಿಲಿಗೆ ತಾಜಾ ಹಣ್ಣು ಮತ್ತು ತರಕಾರಿ ಮಾರಾಟ ಸೇವೆಗೆ ಕೃಷಿ ಸಚಿವರು ಚಾಲನೆ ನೀಡಿದರು.

ಶಾಸಕರಾದ ಶಿವಾನಂದ್ ಪಾಟೀಲ್ ,ಅರುಣ್ ಶಾಪುರ್,ಬಸವನ ಗೌಡ ಪಾಟೀಲ್ ಯತ್ನಾಳ, ಈಶ್ವಂತ್ ರಾಯ್,ದೇವಾನಂದ್ ಚೌಹಣ್, ಮುರುಗೇಶ್ ನಿರಾಣಿ ಸೇರಿದಂತೆ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ