ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣವನ್ನು ಇಂದಿನಿಂದಲೇ ಪಾವತಿಸುವಂತೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಇಂದು ಡಿ.21ರಂದು ನಾಲ್ಕೂ ನಿಗಮದ ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲ ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಎಲ್ಲ ಕಾರ್ಯ ನಿರ್ವಾಹಕ ಅಭಿಯಂತರರಿಗೂ ಸೂಚನೆ ನೀಡಿದ್ದಾರೆ.
01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನ ನಿಗದಿಯನ್ವಯ, ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸಗಳನ್ನು ಲೆಕ್ಕಾಚಾರಗೊಳಿಸಿ. ಪಾವತಿಸಬೇಕಾದ ನಿವ್ವಳ ಮೊತ್ತದ ಕೈಮ್ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಆದೇಶ ನೀಡಲಾಗಿತ್ತು.
ಮುಂದುವರೆದು ಈ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸದ ಮೊತ್ತವನ್ನು 21.12.2024 ರಿಂದ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಡಿ ಸೂಚಿಸಿದ್ದಾರೆ.
2020ರ ಜನವರಿ 1ರಿಂದ ಅನ್ವಯವಾಗುವಂತೆ ಮಾರ್ಚ್ 2023ರಲ್ಲಿ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳ ಹಿಂಬಾಕಿ ಕೊಡುವ ಬಗ್ಗೆಯೂ ಕ್ರಮ ತೆಗೆದುಕೊಂಡು ಕೂಡಲೇ ಬಿಡುಗಡೆ ಮಾಡಬೇಕು ಎಂದು ನಿವೃತ್ತ ನೌಕರರು ಆಗ್ರಹಿಸಿದ್ದಾರೆ.